»   »  ಪಾರ್ವತಮ್ಮ ರಾಜ್ ಕುಮಾರ್ ಗೆ ಚೆನ್ನಮ್ಮ ಪ್ರಶಸ್ತಿ

ಪಾರ್ವತಮ್ಮ ರಾಜ್ ಕುಮಾರ್ ಗೆ ಚೆನ್ನಮ್ಮ ಪ್ರಶಸ್ತಿ

Posted By:
Subscribe to Filmibeat Kannada

ಪಾರ್ವತಮ್ಮ ರಾಜ್ ಕುಮಾರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅನೇಕರಿಗೆ 'ವೀರರಾಣಿ ಕಿತ್ತೂರು ಚೆನ್ನಮ್ಮ' ಪ್ರಶಸ್ತಿ ನೀಡಲು ಸರಕಾರ ಮುಂದಾಗಿದೆ. ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಜುಲೈ 8ರಂದು ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಪಿ ಎಂ ನರೇಂದ್ರಸ್ವಾಮಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.ಮಾರ್ಚ್ 8 ಅಂತರಾಷ್ಟ್ರೀಯ ಮಹಿಳಾ ದಿನದಂದು ನೀಡುವುದು ಸಂಪ್ರದಾಯ. ಆದರೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಪ್ರಶಸ್ತಿಪ್ರದಾನ ಸಮಾರಂಭವನ್ನು ಮುಂದೂಡಲಾಗಿತ್ತು ಎಂದು ಹೇಳಿದರು.

ಏತನ್ಮಧ್ಯೆ 'ಕಿತ್ತೂರು ರಾಣಿ ಚೆನ್ನಮ್ಮ' ಪ್ರಶಸ್ತಿಯ ನಗದು ಬಹುಮಾನವನ್ನು ಅವಧಿ ಮುಗಿದ ಡಿಡಿ ರೂಪದಲ್ಲಿ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ನೀಡಿತ್ತು. ಈ ಘಟನೆಯಿಂದ ಕರ್ನಾಟಕ ಸರಕಾರಕ್ಕೆ ಮುಖಭಂಗವಾಗಿತ್ತು. ಪಾರ್ವತಮ್ಮ ಕಸಿವಿಸಿಗೊಂಡಿದ್ದರು. ಇದರಿಂದ ನೊಂದ ಪಾರ್ವತಮ್ಮ ಸರಕಾರ ನಡೆಸುವ ಯಾವುದೇ ಸಭೆ ಸಮಾರಂಭಗಳಿಗೆ ಇನ್ನು ಮುಂದೆ ತಾನು ಪಾಲ್ಗೊಳ್ಳುವುದಿಲ್ಲ ಎಂದು ಬೇಸರದಿಂದ ನುಡಿದ್ದರು.

(ದಟ್ಸ್ ಕನ್ನಡ ಚಿತ್ರವಾರ್ತೆ)

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada