»   » ಡಾ.ಭಾರತಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ

ಡಾ.ಭಾರತಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ

Posted By:
Subscribe to Filmibeat Kannada

ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 2008-09 ನೆ ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಆರು ಸಂಸ್ಥೆಗಳು ಮತ್ತು 16 ಮಹಿಳೆಯರನ್ನು ಆಯ್ಕೆ ಮಾಡಿದೆ. ಸಂಸ್ಥೆಗಳಿಗೆ 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ಮಹಿಳೆಯರಿಗೆ ತಲಾ 10 ಸಾವಿರ ರೂ. ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅದೇ ರೀತಿ ಯಶೋಧರಮ್ಮ ದಾಸಪ್ಪ ಪ್ರಶಸ್ತಿಗೆ ನಾಲ್ಕು ಸ್ತ್ರೀಶಕ್ತಿ ಗುಂಪುನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರೂ ಆಗಿರುವ ಸಚಿವರು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಅಧ್ಯಕ್ಷತೆಯಲ್ಲಿ ಪ್ರದಾನ ಮಾಡಲಾಗುವುದು.

ಹಿರಿಯ ಕಲಾವಿದೆ ಭಾರತಿಯವರಿಗೆ ಇತ್ತೀಚೆಗೆ ಕರ್ನಾಟಕ ರಾಜ್ಯ ಮುಕ್ತವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗಿತ್ತು. ನನ್ನ ಎಲ್ಲಾ ಸಾಧನೆ ಪುರಸ್ಕಾರ, ಪ್ರಶಸ್ತಿಗಳು ವಿಷ್ಣುವರ್ಧನ್ ಗೆ ಅರ್ಪಿತ ಎಲ್ಲ ಅವರ ಪ್ರಭಾವದಿಂದ ನನಗೆ ಲಭಿಸಿದೆ ಅಷ್ಟೇ ಎಂದು ವಿನಮ್ರವಾಗಿ ಭಾರತಿ ನುಡಿದಿದ್ದರು.

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada