Don't Miss!
- News
Kamal Haasan: ಕಾಂಗ್ರೆಸ್ನಿಂದ ಕಣಕ್ಕಿಳಿಯಲಿದ್ದಾರಾ ಕಮಲ್ ಹಾಸನ್? ಅವರ ಮಾತು ಇಲ್ಲಿದೆ
- Sports
U-19 Women's World Cup 2023: ಸೆಮಿಫೈನಲ್ ಪ್ರವೇಶಿಸಿದ ಭಾರತಕ್ಕೆ ನ್ಯೂಜಿಲೆಂಡ್ ಎದುರಾಳಿ
- Lifestyle
Horoscope Today 26 Jan 2023: ಗುರುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Technology
WhatsApp: ವಾಟ್ಸಾಪ್ ಮ್ಯಾಕ್ಒಎಸ್ MacOS ಆ್ಯಪ್ ಬಿಡುಗಡೆ! ಇದನ್ನು ಬಳಸುವುದು ಹೇಗೆ?
- Finance
Budget 2023: ಹಲ್ವಾ ಸಮಾರಂಭ ಎಂದರೇನು, ಪ್ರಾಮುಖ್ಯತೆಯೇನು?
- Automobiles
ಬೊಲೆರೊ ನಿಯೋ ಲಿಮಿಟೆಡ್ ಎಡಿಷನ್ ಕುರಿತ ಟಾಪ್ ವಿಷಯಗಳಿವು
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸಿನಿ ನಿರ್ಮಾಪಕ ಸಿ.ವಿ.ಎಲ್. ಶಾಸ್ತ್ರಿ ವಿಧಿವಶ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದರು. ಇವರು ಪತ್ನಿ ಮತ್ತು ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗ, ಸ್ನೇಹಿತರನ್ನು ಅಗಲಿದ್ದಾರೆ. ಸದಾಶಿವನಗರದಲ್ಲಿರುವ ಅವರ ಮನೆಯಲ್ಲಿ ಶುಕ್ರವಾರ ಮಧ್ಯಾಹ್ನದವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.
ಕನ್ನಡ ಚಲನಚಿತ್ರ ಹಂಚಿಕೆದಾರರೂ ಆಗಿದ್ದ 'ಮಾಲ್ಗುಡಿ ಡೇಸ್' ನಿರ್ಮಾಪಕ ಸಿ.ವಿ.ಎಲ್, ದೇಶದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದರು. ಮೂಲತಃ ರಾಮನಗರದವರಾದ ಇವರು ಐವತ್ತರ ದಶಕದಲ್ಲಿ ಬೆಂಗಳೂರಿಗೆ ಬಂದು ನೆಲೆಸಿ ಚಲನ ಚಿತ್ರೋದ್ಯಮದಲ್ಲಿ ತೊಡಗಿಸಿ ಕೊಂಡಿದ್ದವರು.
ಕಳ್ಳಕುಳ್ಳ, ಮಲಯ ಮಾರುತ, ಪಕ್ಕಾ ಕಳ್ಳ, ಹೆಣ್ಣು ಹುಲಿ, ಆಸೆಯ ಬಲೆ ಮುಂತಾದ ಯಶಸ್ವಿ ಚಲನಚಿತ್ರಗಳನ್ನು ನಿರ್ಮಿಸಿದ್ದರು. ಅವರ ನಿರ್ಮಾಣದ ಆತಂಕ ಚಿತ್ರಕ್ಕೆ ಆರು ರಾಜ್ಯ ಪ್ರಶಸ್ತಿಗಳು ಬಂದಿದ್ದವು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು, 'ಮಲಯ ಮಾರುತ' ಸೇರಿದಂತೆ ಹಲವು ಯಶಸ್ವಿ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. 19 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆದಿದ್ದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಯಶಸ್ಸಿಗೆ ಇವರು ಕಾರಣರಾಗಿದ್ದರು.
ಶಾಸ್ತ್ರಿ ಮೂವೀಸ್, ಶಾಸ್ತ್ರಿ ಸಿನಿ ಆರ್ಟ್ಸ್ ಪ್ರೊಡಕ್ಷನ್ ಸಂಸ್ಥೆಗಳ ಮೂಲಕ ಹಲವು ಕನ್ನಡ ಚಿತ್ರಗಳ ನಿರ್ಮಾಪಕರಾಗಿ, ಹಂಚಿಕೆದಾರರಾಗಿ ಕನ್ನಡ ಚಲನಚಿತ್ರೋದ್ಯಮಕ್ಕೆ ಬಲುದೊಡ್ಡ ಕೊಡುಗೆ ನೀಡಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿದ್ದ ಇವರು ಕರ್ನಾಟಕ ಚಿತ್ರೋದ್ಯಮದ ಬೆಳವಣಿಗೆಗೆ ಬಹಳಷ್ಟು ಕೆಲಸಗಳನ್ನು ಮಾಡಿದ್ದರು. ಎಂಬತ್ತರ ದಶಕದಲ್ಲಿ ಇವರು ರಾಜಕುಮಾರ್ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.