Just In
Don't Miss!
- News
'ಮಮತಾರನ್ನು 50 ಸಾವಿರ ಮತಗಳಿಂದ ಸೋಲಿಸದಿದ್ದರೆ ರಾಜಕೀಯ ತ್ಯಜಿಸುತ್ತೇನೆ'
- Automobiles
ಇನ್ಮುಂದೆ ಮನೆ ಬಾಗಿಲಿಗೆ ಡೀಸೆಲ್ ಪೂರೈಕೆ ಮಾಡಲಿದೆ ಹೊಸ ಸ್ಟಾರ್ಟ್ ಅಪ್ ಕಂಪನಿ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 18ರ ಚಿನ್ನ, ಬೆಳ್ಳಿ ದರ
- Education
KTIL Recruitment 2021: 38 ಡಿಟಿಸಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಜೋ ರೂಟ್ ದ್ವಿಶತಕ, ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ಗೆ 7 ವಿಕೆಟ್ ಗೆಲುವು
- Lifestyle
ಬಂಜೆತನಕ್ಕೆ ಕಾರಣವಾಗುವ ಥೈರಾಯ್ಡ್ ಲಕ್ಷಣಗಳು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಉದ್ಘಾಟನೆಗೆ ಸಿದ್ಧವಾಗಿದೆ ವರನಟ ರಾಜ್ ಸ್ಮಾರಕ
ಅಂತೂ ಇಂತೂ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ವರನಟ ಡಾ.ರಾಜ್ ಕುಮಾರ್ ಅವರ ಸ್ಮಾರಕದ ಕಾಮಗಾರಿಯ ಮೊದಲ ಹಂತ ಉದ್ಘಾಟನೆಗೆ ಸಿದ್ಧವಾಗೊಂಡಿದೆ. ಈ ವಿಷಯವನ್ನು ಗುರುವಾರ (ಜ.6) ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ತಿಳಿಸಿದರು.
ಜಂಟಿ ಅಧಿವೇಷನವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ನೆನಪಿನ ಸ್ಮಾರಕ ನಿರ್ಮಾನಕ್ಕೆ ಭೂಮಿ ಖರೀದಿಸಲಾಗಿದೆ. ಶೀಘ್ರದಲ್ಲೇ ನಿರ್ಮಾಣ ಕಾರ್ಯ ನಡೆಯಲಿದೆ ಎಂದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಡಾ.ರಾಜ್ ಸ್ಮಾರಕ 2010ರ ನವೆಂಬರ್1ಕ್ಕೆ ಉದ್ಘಾಟನೆಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಕಾಮಗಾರಿ ವಿಳಂಬವಾಗಿತ್ತು.
ಕನ್ನಡ ಚಿತ್ರರಂಗಕ್ಕೆ ಅಣ್ಣಾವ್ರು ಸಲ್ಲಿಸಿದ ಸೇವೆ, ಅವರು ಅಭಿನಯಿಸಿದ ಚಿತ್ರಗಳು, ಹಾಡಿದ ಹಾಡುಗಳು, ಅಣ್ಣಾವ್ರ ಸಂಭಾಷಣೆ ಸ್ಮಾರಕದಲ್ಲಿ ಸ್ಥಾನಪಡೆಯಲಿವೆ. ಒಟ್ಟು 2.5 ಎಕರೆ ಪ್ರದೇಶದಲ್ಲಿ ವಸ್ತು ಸಂಗ್ರಹಾಲಯ, ಧ್ಯಾನ ಮಂದಿರ, ಬಯಲು ರಂಗಮಂದಿರ, ಉದ್ಯಾನವನ ಹಾಗೂ ಗ್ರಂಥಾಲಯ ನಿರ್ಮಾಣವಾಗಲಿದೆ. ಅಂದಾಜು ರು.10 ಕೋಟಿ ವೆಚ್ಚದಲ್ಲಿಡಾ.ರಾಜ್ ಸ್ಮಾರಕ ನಿರ್ಮಿಸಲಾಗುತ್ತಿದೆ. [ವಿಷ್ಣುವರ್ಧನ್]