»   » ಮೈಸೂರಲ್ಲಿ ಚಿಣ್ಣರ ಅಂತಾರಾಷ್ಟ್ರೀಯ ಚಿತ್ರೋತ್ಸವ

ಮೈಸೂರಲ್ಲಿ ಚಿಣ್ಣರ ಅಂತಾರಾಷ್ಟ್ರೀಯ ಚಿತ್ರೋತ್ಸವ

Posted By:
Subscribe to Filmibeat Kannada
International Film Festival in Mysore
ಚಿಲ್ಡ್ರನ್ಸ್ ಇಂಡಿಯಾ ಸಂಸ್ಥೆಯ ವತಿಯಿಂದ ನಗರದಲ್ಲಿ ಆರನೇ ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಆಚರಿಸಲಾಗುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಎನ್.ಆರ್.ನಂಜುಂಡೇಗೌಡ ತಿಳಿಸಿದರು. ಫೆ.8ರಿಂದ 10ರವರೆಗೆ ಚಲನಚಿತ್ರೋತ್ಸವ ನಡೆಯಲಿದ್ದು, ಇದರ ಅಂಗವಾಗಿ ನಗರದ ಸರಸ್ವತಿ ಮತ್ತು ನಾಗರಾಜ್ ಚಿತ್ರಮಂದಿರಗಳಲ್ಲಿ ಶ್ರೀಲಂಕಾ , ಇರಾನ್ ಮತ್ತು ಕನ್ನಡ ಚಿತ್ರಗಳನ್ನು ಪ್ರತಿ ದಿನ ಬೆಳಿಗ್ಗೆ 8.30 ಕ್ಕೆ ಪ್ರದರ್ಶಿಸಲಾಗುವುದು ಎಂದು ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಮೂರು ದಿನಗಳ ಕಾಲ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ಪರಿಸರ ವಿಜ್ಞಾನ ಸೇರಿದಂತೆ ಇತರೆ ವಿಷಯಗಳನ್ನು ಮಕ್ಕಳಿಗೆ ಮನದಟ್ಟು ಮಾಡಿಕೊಡುವ ಚಿತ್ರಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಗ್ರಾಮಾಂತರ ಮಕ್ಕಳೂ ಇದರ ಪ್ರಯೋಜನ ಪಡೆಯಬೇಕೆಂದರು. ಪ್ರದರ್ಶನಕ್ಕೆ ಉಚಿತ ಪ್ರವೇಶವಿದ್ದು, ಶಾಲಾ ಶಿಕ್ಷಕರು ಮತ್ತು ಪೋಷಕರು ಮಕ್ಕಳನ್ನು ಚಲನಚಿತ್ರ ವೀಕ್ಷಣೆಗೆ ಕರೆತರಬೇಕು ಎಂದ ಅವರು, ಈಗಾಗಲೇ ಬೆಂಗಳೂರು, ಮಂಡ್ಯ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚಿತ್ರೋತ್ಸವವನ್ನು ಯಶಸ್ವಿಯಾಗಿ ಆಚರಿಸಲಾಗಿದೆ. ಈ ವರ್ಷದ ಚಿತ್ರೋತ್ಸವದ ವಿಶೇಷ ಚೀನಾದ 7ಚಿತ್ರಗಳನ್ನುಪ್ರದರ್ಶಿಸಲಾಗುವುದು.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada