»   »  ಆಕಾಶವಾಣಿ ಗುಲಬರ್ಗಾ ಕೇಂದ್ರಕ್ಕೆ ದ್ವಿತೀಯ ಸ್ಥಾನ

ಆಕಾಶವಾಣಿ ಗುಲಬರ್ಗಾ ಕೇಂದ್ರಕ್ಕೆ ದ್ವಿತೀಯ ಸ್ಥಾನ

Subscribe to Filmibeat Kannada

ಪ್ರಸಾರಭಾರತಿ ಆಕಾಶವಾಣಿಯ ವಾರ್ಷಿ ಸ್ಪರ್ಧೆಗಳಲ್ಲಿ ಕಳೆದ ಸಾಲಿನ ಎಂ.ಎಲ್. ಮಾನಚಂದಾ ರಾಷ್ಟ್ರೀಯ ಮಟ್ಟದ ತಾಂತ್ರಿಕ ನೈಪುಣ್ಯತಾ ವಿಭಾಗದಲ್ಲಿ ಗುಲ್ಬರ್ಗಾ ಆಕಾಶವಾಣಿ ಕೇಂದ್ರವು ಉತ್ತಮ ನಿರ್ವಹಣೆಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಫೆ. 28 ರಂದು ಲಕ್ನೋದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಕೇಂದ್ರ ವಿದೇಶಾಂಗ ರಾಜ್ಯ ಸಚಿವ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವ ಆನಂದ ಶರ್ಮ ಅವರು ಗುಲ್ಬರ್ಗ ಆಕಾಶವಾಣಿ ಕೇಂದ್ರದ ಇಂಜಿನಿಯರ್ ಎಂ.ಜಿ. ಸಜ್ಜನರ್ ಅವರಿಗೆ ಪ್ರದಾನ ಮಾಡಿದರು. ಪ್ರಸಾರ ಭಾರತೀಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಬಿ.ಎಸ್. ಲಾಲಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಕಾಶವಾಣಿ ಕೇಂದ್ರಗಳಲ್ಲಿ ಉತ್ತಮ ನಿರ್ವಹಣೆ ಹಾಗೂ ಸ್ಪರ್ಧಾತ್ಮಕವಾಗಿ ಇಂಜಿನಿಯರಿಂಗ್ ಸೇವಾ ಕಾರ್ಯವನ್ನು ಗುರುತಿಸಲು 1979ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಗುಲಬರ್ಗಾ ಆಕಾಶವಾಣಿ ಕೇಂದ್ರವು ಪ್ರಥಮ ಬಾರಿಗೆ ಈ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಡಿಜಿಟಲ್ ತಂತ್ರಜ್ಞಾನಕ್ಕೆ ಮಾರ್ಪಾಡು ಹೊಂದುವಲ್ಲಿ ಗುಲ್ಬರ್ಗಾ ಕೇಂದ್ರವು ದೇಶದ ಇತರ ಕೇಂದ್ರಗಳಿಗಿಂತ ಮುಂಚೂಣಿಯಲ್ಲಿದೆ. ಕೇಂದ್ರ ಅಭಿಯಂತರಾದ ಎಂ.ಜಿ. ಸಜ್ಜನರ್ ಅವರ ನೇತೃತ್ವದಲ್ಲಿ ನಿಲಯದ ತಾಂತ್ರಿಕ ಸಿಬ್ಬಂದಿ ಈ ಸಾಧನೆ ಮಾಡಿದ್ದಾರೆ ಎಂದು ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada