»   » ಕುಶಾಲನಗರದಲ್ಲಿ ಪುನೀತ್ 'ಜಾಕಿ'

ಕುಶಾಲನಗರದಲ್ಲಿ ಪುನೀತ್ 'ಜಾಕಿ'

Posted By:
Subscribe to Filmibeat Kannada

ಪೂರ್ಣಿಮಾ ಎಂಟರ್‌ಪ್ರೈಸಸ್ ಲಾಂಛನದಡಿಯಲ್ಲಿ ಡಾ.ರಾಜ್‌ಕುಮಾರ್ ಅರ್ಪಿಸಿ ಪಾರ್ವತಮ್ಮ ರಾಜ್‌ಕುಮಾರ್ ನಿರ್ಮಿಸುತ್ತಿರುವ ಅದ್ದೂರಿ 'ಜಾಕಿ'. ಈ ಚಿತ್ರದ ಚಿತ್ರೀಕರಣವು ಏಪ್ರಿಲ್ 4 ರಿಂದ ಕುಶಾಲನಗರದಲ್ಲಿ ಮುಂದುವರೆದಿದೆ.ಚಿತ್ರಕ್ಕಾಗಿ 19 ದಿನಗಳ ಕಾಲ ಪುನೀತ್-ಭಾವನಾ ಮತ್ತಿತರರು ಭಾಗವಹಿಸಿದ ಹಲವಾರು ಸನ್ನಿವೇಶಗಳನ್ನು ಬೆಂಗಳೂರಿನ ಸುತ್ತಮುತ್ತ ಸತ್ಯ ಹೆಗ್ಡೆ ಛಾಯಾಗ್ರಹಣದಲ್ಲಿ ನಿರ್ದೇಶಕ ಸೂರಿ ಚಿತ್ರಿಸಿಕೊಂಡರು.

ಹತ್ತು ದಿನಗಳ ಕಾಲ ಕುಶಾಲನಗರ ಸುತ್ತಮುತ್ತ ಚಿತ್ರೀಕರಣ ನಡೆಯಲಿದ್ದು ನಂತರ ಮೈಸೂರಿನಲ್ಲಿ ಚಿತ್ರೀಕರಣ ಮುಂದುವರೆಯಲಿದೆ ಎಂದು ನಟ-ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್ ತಿಳಿಸಿದ್ದಾರೆ.ಚಿತ್ರಕ್ಕೆ ಯೋಗರಾಜ್ ಆರ್. ಭಟ್ ಮತ್ತು ಜಯಂತ್ ಕಾಯ್ಕಿಣಿ ಸಾಹಿತ್ಯ, ಸತ್ಯ ಹೆಗ್ಡೆ ಛಾಯಾಗ್ರಹಣ, ಹರಿಕೃಷ್ಣ ಸಂಗೀತ, ದೀಪು ಎಸ್. ಕುಮಾರ್ ಸಂಕಲನ, ಶಶಿಧರ ಅಡಪ ಕಲೆ, ಇಮ್ರಾನ್ ನೃತ್ಯ, ರವಿವರ್ಮ- ಡಿಫರೆಂಟ್ ಡ್ಯಾನಿ ಸಾಹಸ, ಮಲ್ಲಿಕಾರ್ಜುನ ನಿರ್ಮಾಣ ಮೇಲ್ವಿಚಾರಣೆ ಇದೆ.

ಕಥೆ- ಚಿತ್ರಕಥೆ- ಸಂಭಾಷಣೆ ಮತ್ತು ನಿರ್ದೇಶನದ ಹೊಣೆಯನ್ನು ಸೂರಿ ಹೊತ್ತಿದ್ದಾರೆ.ತಾರಾಗಣದಲ್ಲಿ ಪುನೀತ್ ರಾಜ್ ಕುಮಾರ್ ಜೋಡಿಯಾಗಿ ಚತುರ್ಭಾಷಾ ತಾರೆ ಭಾವನಾ ಕಾಣಿಸಿಕೊಳ್ಳುತ್ತಿದ್ದು, ರಂಗಾಯಣ ರಘು, ರವಿ ಕಾಳೆ, ಶೋಭರಾಜ್, ಸಂಪತ್, ಉಮೇಶ್ ಮುಂತಾದವರಿದ್ದಾರೆ.

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada