Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಲ್ಡೀವ್ಸ್ ನಿಂದ ಶ್ರೀಮತಿ ಉಪೇಂದ್ರ ವಾಪಸ್
ತಾರಾ ದಂಪತಿಗಳಾದ ಉಪೇಂದ್ರ, ಪ್ರಿಯಾಂಕ ಒಟ್ಟಾಗಿ ನಟಿಸುತ್ತಿರುವ ಶ್ರೀಮತಿ ಚಿತ್ರದ ಹಾಡು ಹಾಗೂ ಕೆಲ ದೃಶ್ಯಗಳನ್ನು ಮಾಲ್ಡೀವ್ಸ್ನ ಸುಂದರ ಮನಮೋಹಕ ತಾಣಗಳಲ್ಲಿ ಎಂಟು ದಿನಗಳ ಕಾಲ ಚಿತ್ರೀಕರಿಸಿಕೊಂಡು ಬಂದಿದ್ದೇವೆಂದು ನಿರ್ಮಾಪಕ ಆರ್.ಶಂಕರ್ ತಿಳಿಸಿದ್ದಾರೆ. ಇದರೊಂದಿಗೆ ಮಾತಿನ ಭಾಗದ ಚಿತ್ರೀಕರಣ ಮುಗಿದಿದ್ದು ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದೆ.
ಬಾಕಿ ಇರುವ ಹಾಡನ್ನು ಬೆಂಗಳೂರಿನಲ್ಲಿ ಸೆಟ್ ಹಾಕಿ ಚಿತ್ರೀಕರಿಸಲಾಗುವುದು. ಈಗಾಗಲೇ ಒಟ್ಟು 45 ದಿನಗಳ ಚಿತ್ರೀಕರಣವನ್ನು ಮಾಡಲಾಗಿದೆ. ಮಾಲ್ಡೀವ್ಸ್ನಲ್ಲಿ ನಡೆದ ಹಾಡಿನ ಚಿತ್ರೀಕರಣದಲ್ಲಿ 20 ಜನ ಅಲ್ಲಿನ ನೃತ್ಯ ಕಲಾವಿದರು ಭಾಗವಹಿಸಿದ್ದರು. ರೇಖಾ ಪ್ರಕಾಶ್ ನೃತ್ಯ ಸಂಯೋಜನೆ ಮಾಡಿದ್ದರು.
ಜಾನಿಲಾಲ್ರ ಛಾಯಾಗ್ರಹಣ ಇರುವ ಈ ಚಿತ್ರವನ್ನು ಸಂಪತ್ ನಂದಿ ನಿರ್ದೇಶಿಸುತ್ತಿದ್ದಾರೆ. ಪೆಂಡ್ಯಾಲ ಕೃಷ್ಣರ ಸಂಗೀತ ಸಂಯೋಜನೆ, ಉಪೇಂದ್ರರ ಚಿತ್ರಕಥೆ ಹಾಗೂ ಸಂಭಾಷಣೆ ಇದೆ. ಬಾಲಿವುಡ್ ಬೆಡಗಿ ಸೆಲೀನಾ ಜೆಟ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು ಹಿಂದಿಯ ಹಿರಿಯ ನಟ ಪ್ರೇಮ್ ಚೋಪ್ರಾ, ಸಯ್ಯಾಜಿ ಸಿಂಧೆ, ಕೋಟಾ ಶ್ರೀನಿವಾಸರಾವ್ ಉಳಿದ ತಾರಾಗಣದಲ್ಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)