»   »  ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?

ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?

Subscribe to Filmibeat Kannada
Actor Sudeep may contest Lok Sabha election!?
ಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ.

ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದು ಬಿಡುಗಡೆಯಾದ ನಂತರ ಅವರು ತಮ್ಮ ಅಂತಿಮ ನಿರ್ಧಾರವನ್ನು ಪ್ರಕಟಿಸಬಹುದು.

ನಂಬಲರ್ಹ ಮೂಲಗಳ ಪ್ರಕಾರ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಬಳ್ಳಾರಿ ಗಣಿ ಧಣಿಗಳ ವಿರುದ್ಧ ಸುದೀಪ್ ರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಒಟ್ಟಿನಲ್ಲಿ ಬಳ್ಳಾರಿ ರೆಡ್ಡಿಗಳಿಗೆ ಮಣ್ಣು ಮುಕ್ಕಿಸುವ ಲೆಕ್ಕಾಚಾರದಲ್ಲಿ ದೇವೇಗೌಡರು ನಿರತರಾಗಿದ್ದಾರೆ.

ಪ್ರಸ್ತುತ ಚೆನ್ನೈನಲ್ಲಿರುವ ನಟ ಸುದೀಪ್ ಪ್ರತಿಕ್ರಿಯೆಗೆ ಸಿಗುತ್ತಿಲ್ಲ. ಅವರ ಆಪ್ತ ಮೂಲಗಳ ಪ್ರಕಾರ, ಲೋಕಸಭೆ ಚುನಾವಣೆಗೆ ಅವರು ಸ್ಪರ್ದಿಸುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಸುದೀಪ್ ಅವರ ನಿರ್ಧಾರವೇ ಅಂತಿಮ ಎನ್ನಲಾಗಿದ್ದು, ಒಂದೆರಡು ವಾರಗಳಲ್ಲಿ ಸುದೀಪ್ ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಾರೊ ಇಲ್ಲವೋ ಎಂಬುದು ಖಚಿತವಾಗಲಿದೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

ಸುದೀಪ್ ವೀರ ಮದಕರಿ ಚಿತ್ರಕ್ಕೆ ಮರು ನಾಮಕರಣ
ವೀರ ಮದಕರಿ ಶೀರ್ಷಿಕೆ ವಿವಾದಕ್ಕೆ ಮತ್ತೆ ಜೀವ

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada