For Quick Alerts
  ALLOW NOTIFICATIONS  
  For Daily Alerts

  ಶಂಕರ್ ನಾಗ್ ಕನಸು ಕಂಡಿದ್ದು ನಮಗಾಗಿ

  By Mahesh
  |
  <ul id="pagination-digg"><li class="next"><a href="/news/09-shankar-nag-birthday-nanna-tamma-shankara-book-aid0039.html">Next »</a></li></ul>

  ಶಂಕರ್ ನಾಗ್ ಕನಸು ಕಂಡಿದ್ದು ನಮಗಾಗಿ, ನಮ್ಮ ಉದ್ಧಾರಕ್ಕಾಗಿ. ವ್ಯಕ್ತಿಯಾಗಿ ಮಾತ್ರ ಬೆಳೆಯದೇ ಸಮಷ್ಟಿಯ ಸುಖದ ಕನಸು ಹೊತ್ತ ಶಂಕರ್ ನಿಜಕ್ಕೂ ಗ್ರೇಟ್.

  ಶಂಕರ್ ನಾಗ್ ಅವರು ಗಾಂಧೀಜಿ ತತ್ವಪಾಲಕ. ಗಾಂಧಿ ಹೇಳಿದಂತೆ ಬ್ಯಾಕ್ ಟು ವಿಲೇಜ್ ಅಂದ್ರೆ ನಗರದಿಂದ ದೂರದಲ್ಲಿ ಮನೆ ಮಾಡಿ ಸ್ವಾವಲಂಬಿಯಾಗಿ ಎನ್ನುವ ಸಂದೇಶವನ್ನು ಶಂಕರ್ ಇಷ್ಟಪಟ್ಟಿದ್ದರು.

  'ಜೀವನ ಬಂದಂತೆ ನಾವು ಅನುಭವಿಸಬೇಕು', 'ಕೆರೆಯ ನೀರನು ಕೆರೆಗೆ ಚೆಲ್ಲಿ...' ಈ ರೀತಿಯ ತತ್ವಗಳು ಶಂಕರನ ಜೀವನದಲ್ಲಿ ಹಾಸುಹೊಕ್ಕಾಗಿರುವುದನ್ನು ಅನಂತ್ ತಮ್ಮ ಪುಸ್ತಕದಲ್ಲಿ ಎತ್ತಿಹಿಡಿದಿದ್ದಾರೆ.

  ಅನಂತ್ ಅವರ ಹೊತ್ತಿಗೆಗೆ 'ನನ್ನ ತಮ್ಮ ಶಂಕರ'ಎಂದು ಹೆಸರಿಟ್ಟು ತಮ್ಮನ ಜೊತೆಗಿನ ಒಡನಾಟದ ಬಗ್ಗೆ ಹೆಚ್ಚು ಬರೆದಿದ್ದಾರೆ.

  ಆದರೆ ಶಂಕರನ ವೈಯಕ್ತಿಕ ಬದುಕು, ಅವನ ಮಡದಿ, ಮಗು, ಅವಿರತ ದುಡಿಮೆಯ
  ನಡುವೆ ಸಾಂಸಾರಿಕವಾಗಿ ಅವನು ತೊಡಗಿಸಿಕೊಂಡ ರೀತಿ, ಮನೆಯವರ ಬೆಂಬಲದ ಬಗ್ಗೆ ಒಂದಿಷ್ಟು ಮಾಹಿತಿ ಇದ್ದರೆ ಇನ್ನೂ ಚೆನ್ನಾಗಿರುತ್ತಿತ್ತು ಅನಿಸುತ್ತದೆ.

  ಶಂಕರ್ ಯೋಜನೆಗಳು: ಸದಾ ಹೊಸತನ ಶಂಕರ್ ವಿಶೇಷತೆ. ಕನಸುಗಳ ಬೆನ್ನತ್ತಿ ಸುತ್ತುತ್ತಿದ್ದ ಶಂಕರನು ಹಾಕಿಕೊಂಡ ಯೋಜನೆಗಳು ಅನೇಕ.

  ಸ್ಟುಡಿಯೋ ಆಯಿತು, ತೋಟದ ಮನೆ ಮಾಡಿ ವಾಸಮಾಡಿಯಾಗಿತ್ತು, ಡೈರಿ ಆರಂಭಿಸಿದ್ದು ಆಯಿತು. ಇದಕ್ಕಿಂತಲೂ ಹೆಚ್ಚಿನ ರೀತಿಯ ಯೋಜನೆಗಳ ಸರಮಾಲೆ ಶಂಕರನ ತಲೆಯಲ್ಲಿ ತುಂಬಿತ್ತು. ಆತನ ಯೋಜನೆಗಳನ್ನು ಪಟ್ಟಿ ಮಾಡುವುದಾದರೆ :

  * ಕಂಟ್ರಿ ಕಬ್ಲ್ -ಸಾರ್ವಜನಿಕರಿಗಾಗಿ
  * ಅಮ್ಯೂಸ್‌ಮೆಂಟ್ ಪಾರ್ಕ್-ನಂದಿ ಬೆಟ್ಟದ ಕೆಳಗೆ
  * ನಂದಿ ಬೆಟ್ಟಕ್ಕೆ ರೋಪ್‌ವೇ
  * ನಂದಿಬೆಟ್ಟದ ಪಕ್ಕದ ಬೆಟ್ಟದಲ್ಲಿ ಮೈಸೂರಿನ ಬೆಟ್ಟದಲ್ಲಿ ಸಿಗುವ ಮಾದರಿಯಲ್ಲಿ ಭರ್ಜರಿ ಹೋಟೆಲ್(ವಿದೇಶಿ ವಿನ್ಯಾಸದಲ್ಲಿ)
  * ವಿದ್ಯುತ್ ಬಳಸದೆ ಇಟ್ಟಿಗೆ ತಯಾರಿಸುವ ಜರ್ಮನ್, ಹಾಲೆಂಡ್‌ನ ವಿಧಾನ ಅಳವಡಿಕೆ
  * ಅಸ್ಟ್ರಿಯಾ ದೇಶದ ತಂತ್ರಜ್ಞಾನದ ಉಪಯೋಗಿಸಿ ಫ್ಯಾಬ್ರಿಕೇಟೆಡ್ ಶೀಟುಗಳ ಸಹಾಯದಿಂದ ಅಗ್ಗವಾಗಿ (45ಸಾವಿರ ರೂ ) ಮನೆ ತಯಾರಿಸುವುದು.
  * ಸಿದ್ಧ ಉಡುಪು ತಯಾರಿಕಾ ಘಟಕ ವಿದೇಶಿ ರಫ್ತು ಹೆಚ್ಚಿಸುವ ಯೋಜನೆ
  * ಮೆಟ್ರೋ ರೈಲಿಗೆ ಚಾಲನೆ ನೀಡಲು ಪ್ರಯತ್ನ.

  <ul id="pagination-digg"><li class="next"><a href="/news/09-shankar-nag-birthday-nanna-tamma-shankara-book-aid0039.html">Next »</a></li></ul>
  English summary
  Kannada films popular actor late Shankar Nag's birthday celebrated all over Karnataka on Nov.9. Nanna Tamma Shankara is biography of actor by his brother Ananth Nag reviewed. Shankar Nag's dream of running Metro rail, low cost houses, rope way to Nandi hills all for benefit of public.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X