For Quick Alerts
  ALLOW NOTIFICATIONS  
  For Daily Alerts

  ವಿಕೃತಿ ಸಂವತ್ಸರದಲ್ಲಿ 'ಸ್ವಯಂವರ'

  By Rajendra
  |

  ಶ್ರೀನಗರ ಕಿಟ್ಟಿ, ದಿಗಂತ್ ಅಭಿನಯದ 'ಸ್ವಯಂವರ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು\ಎ ಅರ್ಹತಾಪತ್ರವನ್ನು ನೀಡಿದೆ ಎಂದು ನಿರ್ಮಾಪಕ ಎಂ.ಚಂದ್ರು ತಿಳಿಸಿದ್ದಾರೆ.

  ಕರುನಾಡ ಪ್ರೇಕ್ಷಣೀಯ ಸ್ಥಳಗಳು ಹಾಗೂ ದೂರದ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ವಿಕೃತಿ ಸಂವತ್ಸರದಲ್ಲಿ ಬಿಡುಗಡೆಯಾಗಲಿದೆ. ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಇತ್ತೀಚೆಗೆ ಬಿಡುಗಡೆಗೊಂಡ ಚಿತ್ರದ ಧ್ವನಿಸುರುಳಿಗಳಿಗೆ ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

  'ಮಸ್ತ್ ಮಜಾ ಮಾಡಿ' ಎಂಬ ಯಶಸ್ವಿ ಚಿತ್ರವನ್ನು ನಿರ್ದೇಶಿಸಿದ ಅನಂತರಾಜು ಈ ಚಿತ್ರದ ನಿರ್ದೇಶಕರು. ಅವರೇ ಚಿತ್ರಕಥೆಯನ್ನೂ ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿರುವ ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಹಾಗೂ ದಿಗಂತ್ ನಾಯಕರಾಗಿ ನಟಿಸಿದ್ದಾರೆ. ಶರ್ಮಿಳಾ ಮಾಂಡ್ರೆ ನಾಯಕಿ.

  'ಸ್ವಯಂವರದ ಉಳಿದ ತಾರಾಬಳಗದಲ್ಲಿ ತಾರಾ, ಓಂಪ್ರಕಾಶ್‌ರಾವ್, ಅರುಣ್‌ಸಾಗರ್ ಮುಂತಾದವರಿದ್ದಾರೆ. ಎಚ್.ಸಿ.ವೇಣು ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ತುಷಾರ ರಂಗನಾಥ್ ಸಂಭಾಷಣೆ, ಹರ್ಷ ನೃತ್ಯ ಹಾಗೂ ಪಳನಿರಾಜ್ ಅವರ ಸಾಹಸ ಈ ಚಿತ್ರಕ್ಕಿದೆ. ಶ್ರೀ ಸಾಯಿ ಕಂಬೈನ್ಸ್ ಲಾಂಛನದಲ್ಲಿ ಚಿತ್ರವನ್ನು ನಿರ್ಮಿಸಲಾಗಿದೆ.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X