»   » ಏಪ್ರಿಲ್ ನಲ್ಲಿ ಶಿವಣ್ಣನ ಬಹುನಿರೀಕ್ಷಿತ 'ತಮಸ್ಸು'

ಏಪ್ರಿಲ್ ನಲ್ಲಿ ಶಿವಣ್ಣನ ಬಹುನಿರೀಕ್ಷಿತ 'ತಮಸ್ಸು'

Posted By:
Subscribe to Filmibeat Kannada

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ತಮಸ್ಸು' ಚಿತ್ರವನ್ನು ಏಪ್ರಿಲ್ 23 ಅಥವಾ 30ಕ್ಕೆ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಪತ್ರಕರ್ತ ಅಗ್ನಿ ಶ್ರೀಧರ್ ನಿರ್ದೇಶಿಸುತ್ತಿರುವ ಚೊಚ್ಚಲ ಚಿತ್ರ ಇದಾಗಿದ್ದು ಶಿವರಾಜ್ ಕುಮಾರ್ ಅಭಿಮಾನಿಗಳು ಕಾತುರದಿಂದ ನಿರೀಕ್ಷಿಸುವಂತೆ ಮಾಡಿದೆ.

ರವೀಂದ್ರ ನಿರ್ಮಿಸುತ್ತಿರುವ 'ತಮಸ್ಸು'ಚಿತ್ರದ ರೀರೆಕಾರ್ಡಿಂಗ್ ಸದ್ಯದಲ್ಲೆ ಮುಗಿಯಲಿದೆ. ತಮ್ಮ ಸಂಸ್ಥೆಯ ಮೂಲಕ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ನಿರ್ಮಾಪಕರು ತಮ್ಮ ಸಂಸ್ಥೆಯ ನಾಲ್ಕನೇ ಕಾಣಿಕೆಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

'ಆ ದಿನಗಳು' ಎಂಬ ಯಶಸ್ವಿ ಚಿತ್ರ ಸೇರಿದಂತೆ ಕೆಲವು ಚಿತ್ರಗಳಿಗೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದ ಪತ್ರಕರ್ತ ಅಗ್ನಿಶ್ರೀಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಥೆಗಾರರಾಗಿರುವ ಅವರು ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ.ವಿಶಿಷ್ಟ ಕಥಾ ಸಾರಾಂಶವುಳ್ಳ 'ತಮಸ್ಸು' ಚಿತ್ರದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿದ್ದು, ಪದ್ಮಪ್ರಿಯ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ನಾಸಿರ್, ಹರ್ಷಿಕಾ ಪೂರ್ಣಚ್ಛ, ಆಸೀಫ್, ಸುಧಾ ಬೆಳವಾಡಿ, ಸತ್ಯ ಮುಂತಾದವರ ತಾರಾಬಳಗವೂ ಈ ಚಿತ್ರಕ್ಕಿದೆ. ಸಂದೀಪ್ ಚೌಟರ ಸಂಗೀತವಿರುವ ಈ ಚಿತ್ರಕ್ಕೆ ಸುಂದರನಾಥ ಸುವರ್ಣ ಅವರ ಛಾಯಾಗ್ರಹಣವಿದೆ. ನಾಗೇಂದ್ರ ಅರಸ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ, ಶಶಿಧರ್ ಅಡಪ ಕಲಾ ನಿರ್ದೇಶನ ಹಾಗೂ ಮಧುಗಿರಿ ಪ್ರಕಾಶ್ ಅವರ ನಿರ್ಮಾಣ ನಿರ್ವಹಣೆ 'ತಮಸ್ಸು ಚಿತ್ರಕ್ಕಿದೆ.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada