ಈ ಭಾನುವಾರ ಸನ್‌ಫೀಸ್ಟ್ ಚಲನಚಿತ್ರ ಪ್ರಶಸ್ತಿ ಪ್ರದಾನ
ಬೆಂಗಳೂರು : ಸನ್‌ಫೀಸ್ಟ್ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ(ನವೆಂಬರ್ 12) ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕನ್ನಡ ಚಿತ್ರರಂಗದ ಘಟಾನುಘಟಿಗಳೆಲ್ಲ ಅಂದು ನೆರೆದಿರುತ್ತಾರೆಂದು ಬೇರೆ ಹೇಳಬೇಕಿಲ್ಲವಲ್ಲ...? ಯುವ ನಟ-ನಟಿಯರು, ತಂತ್ರಜ್ಞರು, ನಿರ್ಮಾಪಕರು, ನಿರ್ದೇಶಕರು ಹೀಗೆ ಅಂದು ತಾರಾಮೇಳದ ಸಂಭ್ರಮ.
ಕಾರ್ಯಕ್ರಮ ಸಂಜೆ 6.30ಗಂಟೆಗೆ ಆರಂಭಗೊಳ್ಳಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಧರ್ಮಸಿಂಗ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಹಾಗೂ ನಟ ಅಂಬರೀಷ್, ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್, ನಟ ವಿಷ್ಣುವರ್ಧನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ತಲ್ಲಂ ನಂಜುಂಡಶೆಟ್ಟಿ ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications