»   »  ಕಾರು ಅಪಘಾತ: ನಟಿ ಉಮಾಶ್ರೀ ಪಾರು

ಕಾರು ಅಪಘಾತ: ನಟಿ ಉಮಾಶ್ರೀ ಪಾರು

Posted By:
Subscribe to Filmibeat Kannada

ನಟಿ ಉಮಾಶ್ರೀ ಅವರು ಪ್ರಯಾಣಿಸುತ್ತಿದ್ದ ಕಾರು ಬಿಡದಿ ಸಮೀಪ ಶುಕ್ರವಾರ(ಸೆ.11) ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ಜಖಂ ಆಗಿದ್ದು ಉಮಾಶ್ರೀ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಚಿತ್ರೀಕರಣ ಮುಗಿಸಿಕೊಂಡು ಹಿಂತಿರುಗುತ್ತಿದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಶ್ರೀ, ಕಲಾಭಿಮಾನಿಗಳ ಆಶೀರ್ವಾದದಿಂದ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ ಎಂದರು. 'ಗುಲಾಬಿ ಟಾಕೀಸ್' ಚಿತ್ರದಲ್ಲಿನ ಅಮೋಘ ನಟನೆಗಾಗಿ ಅವರು 2007ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ 200ಕ್ಕೂ ಹೆಚ್ಚು ವೈವಿಧ್ಯಮಯ ಪಾತ್ರಗಳನ್ನು ಪೋಷಿಸಿರುವ ಅಭಿನೇತ್ರಿ ಉಮಾಶ್ರೀ. ಅವರು ಇನ್ನೂ ಹೀಗೆ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸುತ್ತಿರಬೇಕು ಎಂಬುದು ಕಲಾರಸಿಕರ ಹಾರೈಕೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada