Don't Miss!
- Sports
ಗೆದ್ದ ಜಯ್ ಶಾ ಹಠ, ಪಾಕ್ಗೆ ಹಿನ್ನೆಡೆ; ತಟಸ್ಥ ಸ್ಥಳದಲ್ಲಿ 2023ರ ಏಷ್ಯಾಕಪ್ ಆಯೋಜಿಸಲು ನಿರ್ಧಾರ
- Lifestyle
Horoscope Today 5 Feb 2023: ಭಾನುವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ಗುಜರಾತ್ಗೆ ಬರಲಿದ್ದಾರೆ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್
- Finance
ಅದಾನಿ ಸ್ಟಾಕ್ ಕುಸಿತ: 'ನಿಯಂತ್ರಕರು ಅವರ ಕೆಲಸ ಮಾಡುತ್ತಾರೆ', ಎಂದ ವಿತ್ತ ಸಚಿವೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್ಯುವಿ
- Technology
ಅಜ್ಜಿಗೆ ಆಪ್ಗಳ ಬಗ್ಗೆ ತಿಳಿಸಿಕೊಟ್ಟ ಯುವಕ; ವೈರಲ್ ಆಯ್ತು ವಿಡಿಯೋ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ
ಕನ್ನಡದ ಮೇರು ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯತಿಥಿ ಆಚರಿಸಲಾಗುತ್ತಿದೆ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ವಿಷ್ಣುದಾದಾ ಅಗಲಿ ಇಂದಿಗೆ 11 ವರ್ಷಗಳು ಕಳೆದಿವೆ. ಆದರೂ ವಿಷ್ಣು ಕನ್ನಡ ಚಿತ್ರಪ್ರಿಯರ ಮನದಲ್ಲಿ ಇಂದಿಗೂ ಜೀವಂತವಾಗಿದ್ದಾರೆ.
2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳದಿನ. ಅದ್ಭುತ ಸಿನಿಮಾಗಳನ್ನು ಮಾಡುತ್ತ ಅಭಿಮಾನಿಗಳನ್ನು ರಂಜಿಸುತ್ತಿದ್ದ ವಿಷ್ಣು ದಾದಾ ಮರೆಯಾದ ದಿನವಿದು. 11ವರ್ಷಗಳ ಹಿಂದೆ ಇದೇ ದಿನ ಇಡೀ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿತ್ತು. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅನಾಥಮಾಡಿ, ವಿಷ್ಣುದಾದಾ ಬಾರದ ಲೋಕಕ್ಕೆ ಹೊರಟು ಹೋಗಿದ್ದರು.
ಸಾಹಸಿಂಹ ಮರೆಯಾಗಿ11 ವರ್ಷಗಳು ಕಳೆದಿವೆ. ಇಂದು ಅವರ ಪುಣ್ಯ ಸ್ಮರಣೆ. ಅಭಿಮಾನಿಗಳು ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋಗೆ ಬಂದು ನೆಚ್ಚಿನ ನಟನ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಸಮಾಧಿಗೆ ಹೂವಿನಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿ ವಿಷ್ಣುದಾದಾನನ್ನು ಸ್ಮರಿಸಲಿದ್ದಾರೆ.
Recommended Video
ಇನ್ನು ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲಿ ಸ್ಮಾರಕ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ಅಭಿಮಾನಿಗಳು ಸಹ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುಣ್ಯಸ್ಮರಣೆಯ ಅಂಗವಾಗಿ ಅಭಿಮಾನಿಗಳಿಂದ ಅನ್ನದಾನ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ.