ಪ್ರಣಯರಾಜ ಶ್ರೀನಾಥ್ ಗೆ ಗೌರವ ಡಾಕ್ಟರೇಟ್
ಬೆಂಗಳೂರು, ಸೆ.12: ಚಲನಚಿತ್ರ ನಟ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀನಾಥ್ ಅವರಿಗೆ ಕೊಲಂಬೊದ ದಿ ಓಪನ್ ಇಂಟರ್ ನ್ಯಾಷನಲ್ ಯುನಿವರ್ಸಿಟಿ ಫಾರ್ ಕಾಂಪ್ಲಿಮೆಂಟರಿ ಮೆಡಿಸಿನ್ಸ್ ಸಂಸ್ಥೆ ಗೌರವ ಡಾಕ್ಟರೇಟ್ ಪ್ರಕಟಿಸಿದೆ.
ಪ್ರಣಯರಾಜ ಶ್ರೀನಾಥ್ ಅವರು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟನ್ನು ನೀಡಲಾಗಿದೆ. ಸೆ.20ರಂದು ಕೌಲಾಲಂಪುರದಲ್ಲಿ ನಡೆಯುವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ದಟ್ಸ್ ಕನ್ನಡ ಸಿನಿವಾರ್ತೆ)


Click it and Unblock the Notifications