twitter
    For Quick Alerts
    ALLOW NOTIFICATIONS  
    For Daily Alerts

    ಕನ್ನಡದ ಧ್ರುವತಾರೆ ಕಣ್ಮರೆಯಾಗಿ ಇಂದಿಗೆ 6ವರ್ಷ

    |

    ವರನಟ ಡಾ.ರಾಜಕುಮಾರ್ ನಮ್ಮನ್ನಗಲಿ ಇಂದಿಗೆ (ಏ 12) ಆರು ವರ್ಷ. ಕನ್ನಡ ಚಿತ್ರರಂಗದ ಪಾಲಿಗೆ ಹಿರಿಯ ಅಣ್ಣನಂತಿದ್ದ ಮತ್ತು ಅವರ ಮಾತಿಗೆ ಎಲ್ಲರೂ ಗೌರವ ಕೊಡುತ್ತಿದ್ದರಿಂದ ಚಿತ್ರರಂಗದ ಮತ್ತು ಅಭಿಮಾನಿಗಳ ಪಾಲಿಗೆ 'ಅಣ್ಣಾವ್ರು'. ಡಾ. ರಾಜ್ 12.04.2006ರಂದು ಹೃದಾಯಾಘಾತದಿಂದ ನಿಧನ ಹೊಂದಿದರು.

    ಕನ್ನಡ ರಂಘಭೂಮಿಯ ಹೆಸರಾಂತ ಪ್ರತಿಭೆ ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ದಂಪತಿಗಳ ಹಿರಿಯ ಮಗನಾಗಿ ಚಾಮರಾಜನಗರ 1929ರ ಏಪ್ರಿಲ್ 24ರಂದು ರಾಜ್‌ಕುಮಾರ್ ಹುಟ್ಟಿದರು.ಬೇಡರ ಕಣ್ಣಪ್ಪ ಚಿತ್ರದಿಂದ ನಾಯಕನಟನಾಗಿ ಅಭಿನಯಿಸಲು ಪ್ರಾರಂಭಿಸಿದ ರಾಜಕುಮಾರ್ 205 ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿದ್ದರು.

    ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದ ಬಂಗಾರದ ಮನುಷ್ಯ ಡಾ. ರಾಜ್ ಅವರಿಗೆ ನಟಸಾರ್ವಭೌಮ ಬಿರುದು, ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ, ಹ೦ಪಿ ವಿಶ್ವವಿದ್ಯಾಲಯದಿ೦ದ ನಾಡೋಜ ಪದವಿ, ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. ಅಲ್ಲದೆ ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಕೂಡಾ ಪುರಸ್ಕೃತರಾದವರು.

    ಗೋಕಾಕ್ ಚಳುವಳಿಯು ಪ್ರಾರಂಭಗೊಂಡು ಹಲವಾರು ದಿನಗಳು ಕಳೆದರೂ, ಜನಸಾಮಾನ್ಯರಿಂದ ಉತ್ಸಾಹದ ಪ್ರತಿಕ್ರಿಯೆ ಕಂಡು ಬರದಿದ್ದಾಗ, ಡಾ. ರಾಜ್ ಅವರನ್ನು ಚಳುವಳಿಗೆ ಆಹ್ವಾನಿಸಿ, ಚಳುವಳಿಯ ಬಲವರ್ಧನೆ ಮಾಡಬೇಕೆಂದು ಕೋರಲಾಯಿತು. ಡಾ. ರಾಜ್ ನೇತೃತ್ವದಲ್ಲಿ ಕನ್ನಡ ಚಿತ್ರರಂಗ, ಗೋಕಾಕ್ ಚಳುವಳಿಗೆ ಸಂಪೂರ್ಣ ಸಹಕಾರ ನೀಡಿ, ಕನ್ನಡದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು, ಅಭಿಮಾನ ಬೆಳೆಸಲು, ಕನ್ನಡ ಭಾಷೆಗೆ ಸಿಗಬೇಕಾದ ಹಕ್ಕುಗಳು,ಸೌಲಭ್ಯಗಳನ್ನು ಆಗಿನ ಕರ್ನಾಟಕ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಲು, ಡಾ.ರಾಜ್ ಅವರ ಭಾಷಣಗಳು ಹಾಗು ಚಳುವಳಿಯ ನೇತೃತ್ವ ಸಹಾಯಕಾರಿಯಾದವು.

    ಜುಲೈ 30, 2000ನೇ ವರ್ಷದಲ್ಲಿ ಕುಖ್ಯಾತ ದಂತಚೋರ ವೀರಪ್ಪನ್ ನಿಂದ ಅಪಹರಣವಾಗಿದ್ದ ರಾಜ್‌ಕುಮಾರ್ 108 ದಿನಗಳ ನಂತರ ಬಿಡುಗಡೆಯಾಗಿದ್ದರು.ಅಂತಿಮ ದಿನಗಳಲ್ಲಿ ಮಂಡಿನೋವು ಹಾಗು ಎದೆನೋವಿನಿಂದ ಬಳಲಿದ ಡಾ.ರಾಜ್ ಏಪ್ರಿಲ್ 12 , 2006 ಬುಧವಾರದಂದು ಮಧ್ಯಾಹ್ನ 1.45ರ ಸುಮಾರಿಗೆ ಬೆಂಗಳೂರಿನಲ್ಲಿ ತಮ್ಮ ಕೊನೆಯುಸಿರೆಳದರು.

    ಕನ್ನಡ ಚಿತ್ರರಂಗದ ದಂತಕಥೆಯಾಗಿದ್ದ ಡಾ.ರಾಜ್ ಅವರ ಅಗಲಿಕೆಯಿಂದ, ಒಂದು ಸುವರ್ಣ ಯುಗದ ಅಂತ್ಯವಾದಂತಾಯಿತು.

    English summary
    Today (April 12) is the sixth death anniversary of Kannada Film Icon Dr. Rajkumar. Dr. Raj died of cardiac arrest at his residence in Bangalore on April 12, 2006.
    Thursday, April 12, 2012, 14:54
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X