twitter
    For Quick Alerts
    ALLOW NOTIFICATIONS  
    For Daily Alerts

    ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ದಿನಾಂಕ ಪ್ರಕಟ

    |

    ಹದಿಮೂರನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆ ಇಂದು (ಜನವರಿ 27) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಚಲನಚಿತ್ರೋತ್ಸವದ ಲೋಗೋ ಬಿಡುಗಡೆ ಮಾಡಿದರು.

    2006ರಲ್ಲಿ ಆರಂಭವಾದ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವವು ಅಂತಾರಾಷ್ಟ್ರೀಯ ಮಾನ್ಯತೆ ಪಡೆದುಕೊಂಡಿದೆ. ಈ ವರ್ಷದ ಸಿನಿಮೋತ್ಸವವು ಮಾರ್ಚ್ 3 ರಿಂದ 13ರವರೆಗೆ ನಡೆಯಲಿದೆ.

    ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ''ಅಂತಾರಾಷ್ಟ್ರೀಯ ಸಿನಿಮೋತ್ಸವವು ವಿಶ್ವಮಟ್ಟದಲ್ಲಿ ಗುರುತು ಪಡೆದುಕೊಂಡಿದೆ. ಇದು 'ಬ್ರ್ಯಾಂಡ್ ಬೆಂಗಳೂರು' ನಿರ್ಮಾಣ ಮಾಡಲು ಹೆಚ್ಚು ಸಹಕಾರಿಯಾಗುವ ನಿರೀಕ್ಷೆ ಇದೆ'' ಎಂದಿದ್ದಾರೆ.

    13 BIFFS Logo Released By CM Basavaraj Bommai, Film Fest Going to Be Held in March
    ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂಟರ್ ನ್ಯಾಷನಲ್ ಫೆಡರೇಷನ್ ಆಫ್ ಫಿಲಂ ಪ್ರೊಡ್ಯೂಸರ್ಸ್ ಅಸೋಸಿಯೇಷನ್ ಮಾನ್ಯತೆ ನೀಡಿದೆ. ಈ ಮೂಲಕ ಚಿತ್ರೋತ್ಸವಕ್ಕೆ ಜಾಗತಿಕ ಮನ್ನಣೆ ದೊರೆತಿದೆ. ವಿಶ್ವದ 45 ಜಾಗತಿಕ ಮಟ್ಟದ ಚಲನಚಿತ್ರೋತ್ಸವಗಳ ಪೈಕಿ ಬೆಂಗಳೂರು ಸೇರಿರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಇತರೆ ದೇಶಗಳಿಗಿಂತ ಮುನ್ನವೇ ಕನ್ನಡ ಚಲನಚಿತ್ರಗಳು ಹಲವಾರು ಪ್ರಯೋಗಗಳನ್ನು ಮಾಡಿ ಯಶಸ್ವಿಯಾಗಿದೆ. ಚಿತ್ರೋತ್ಸವದಲ್ಲಿ ಅತ್ಯುತ್ತಮವಾದ ಕಲಾತ್ಮಕ ಕನ್ನಡ ಚಿತ್ರಗಳನ್ನು ಪ್ರದರ್ಶಿಸಬೇಕು. ಗುಣಮಟ್ಟಕ್ಕೆ ಆದ್ಯತೆ ನೀಡಿ ಅರ್ಥಪೂರ್ಣ ಚಿತ್ರಗಳಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ಗಮ್ಯವಾಗಿಸಬೇಕು ಎಂದು ಸಲಹೆ ನೀಡಿದರು.

    13 BIFFS Logo Released By CM Basavaraj Bommai, Film Fest Going to Be Held in March
    ಕನ್ನಡಿಗರಿಗೆ ಜಾಗತಿಕ ಚಿತ್ರಗಳನ್ನು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸಲು ಚಿತ್ರೋತ್ಸವ ವೇದಿಕೆಯಾಗಬೇಕು. ಸಾಮಾಜಿಕ ಬದುಕಿನಲ್ಲಿ ಮನರಂಜನೆ ಹಾಸುಹೊಕ್ಕಾಗಿರುವುದರಿಂದ ಚಲನಚಿತ್ರಗಳು ಮುಖ್ಯವಾಗುತ್ತವೆ. ಚಿತ್ರೋತ್ಸವದ ಮೂಲಕ ಸಾಮಾಜಿಕ ಸಂದೇಶವನ್ನು ನೀಡಬೇಕು. ಸಿನಿಮಾಗಳಲ್ಲಿ ಆಸಕ್ತಿ ಇರುವ ನಿರ್ದಿಷ್ಟ ಜನ ಚಲನಚಿತ್ರೋತ್ಸವಕ್ಕೆ ಆಗಮಿಸುವುದರಿಂದ ನಿರ್ದಿಷ್ಟ ವಿಷಯವನ್ನು ಆಧರಿಸಿ ಚಲನಚಿತ್ರೋತ್ಸವಕ್ಕೆ ನಡೆಸುವುದು ಅಗತ್ಯ ಎಂದರು.

    ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವು ಪ್ರತಿ ವರ್ಷ ಫೆಬ್ರವರಿ ತಿಂಗಳಲ್ಲಿ ನಡೆಯುವುದು ಪದ್ಧತಿ ಆದರೆ ಈ ಬಾರಿ ಕೋವಿಡ್ ಪರಿಸ್ಥಿತಿ ಇರುವ ಕಾರಣ ಸಿನಿಮೋತ್ಸವವನ್ನು ಮಾರ್ಚ್ ತಿಂಗಳಲ್ಲಿ ನಡೆಸಲಾಗುತ್ತಿದೆ.

    ''ಫೆಬ್ರವರಿ ತಿಂಗಳ ಅಂತ್ಯದ ವೇಳೆಗೆ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ವಿಶ್ವಾಸವಿದೆ. ಮಾರ್ಚ್ ಆರಂಭದ ವೇಳೆಗೆ ಚಿತ್ರಮಂದಿರಗಳಲ್ಲಿ 100 ಆಕ್ಯುಪೆನ್ಸಿ ನೀಡುವ ವಿಶ್ವಾಸವಿದೆ'' ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಹೇಳಿದ್ದಾರೆ.

    ಚಲನಚಿತ್ರೋತ್ಸವವು ಒರಾಯನ್ ಮಾಲ್‌ನಲ್ಲಿಯೇ ನಡೆಯಲಿದೆಯೇ ಅಥವಾ ಬೇರೆಡೆಗೆ ಸ್ಥಳಾಂತರ ಆಗಲಿದೆಯೇ ಎಂಬ ಬಗ್ಗೆ ಇನ್ನೂ ನಿಶ್ಚಯಿಸಲಾಗಿಲ್ಲ ಎಂದು ಸಹ ಸುನಿಲ್ ಪುರಾಣಿಕ್ ಹೇಳಿದ್ದಾರೆ.

    ತೋಟಗಾರಿಕಾ ಸಚಿವ ಮುನಿರತ್ನ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಂ, ಸಂಘಟನಾ ಸಮಿತಿ ಸದಸ್ಯರಾದ ಖ್ಯಾತ ಕಲಾವಿದೆ ಸುಧಾರಾಣಿ, ಕಲಾ ನಿರ್ದೇಶಕ ಶಶಿಧರ್ ಅಡಪ, ಕಲಾವಿದೆ ಸೋನುಗೌಡ, ಕಲಾ ನಿರ್ದೇಶಕ ಹೆಚ್.ಎನ್.ನರಹರಿರಾವ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್,ಆಯುಕ್ತ ಪಿ.ಎಸ್.ಹರ್ಷಾ ಉಪಸ್ಥಿತರಿದ್ದರು.

    English summary
    13 Bengaluru International Film Festival's Logo released today by CM Basavaraj Bommai. Film fest going to be held March this year.
    Friday, January 28, 2022, 10:10
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X