»   »  ಅಮೃತ ಮಹೋತ್ಸವ ಕಟ್ಟಡಕ್ಕೆ ಸರ್ಕಾರ ಭರವಸೆ

ಅಮೃತ ಮಹೋತ್ಸವ ಕಟ್ಟಡಕ್ಕೆ ಸರ್ಕಾರ ಭರವಸೆ

Posted By:
Subscribe to Filmibeat Kannada
Yeddyurappa
ಕನ್ನಡ ಚಿತ್ರರಂಗಕ್ಕೆ 75 ವರ್ಷ ಸಂಧಿರುವ ಈ ಶುಭ ಗಳಿಗೆಯಲ್ಲಿ ರಾಜ್ಯ ಸರ್ಕಾರವೇ ಅಮೃತ ಮಹೋತ್ಸವ ಕಟ್ಟಡವನ್ನು ನಿರ್ಮಿಸಿ ಕೊಡಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕರ್ನಾಟಕ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು, ಹಿರಿಯ ನಿರ್ಮಾಪಕರು, ನಿರ್ದೇಶಕರು ಹಾಗೂ ನಟರೊಂದಿಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಅವರು ಈ ಭರವಸೆ ನೀಡಿದರು. ಅಮೃತ ಮಹೋತ್ಸವ ಭವನ ಹೇಗಿರಬೇಕು ಎಂಬುದರ ಕುರಿತು ತನ್ನದೇ ನೀಲ ನಕ್ಷೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಕೊಡಲಿ. ಸರ್ಕಾರ ಅದನ್ನು ಪರಿಶೀಲಿಸಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಮಾತನಾಡಿ, ಮಾರ್ಚ್ 1 ರಿಂದ 3ರ ವರೆಗೂ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಅಮೃತ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಕನ್ನಡ ಚಲನಚಿತ್ರಕ್ಕೆ ಗಣನೀಯ ಸೇವೆ ಸಲ್ಲಿಸಿದ 108 ಮಂದಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಅವರು ಹೇಳಿದರು. ವರ್ಷಪೂರ್ತಿ ನಡೆಯುವ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ 11 ಕೋಟಿ ರುಪಾಯಿ ವೆಚ್ಚವಾಗಲಿದೆ. ಅದರಲ್ಲಿ ಸರ್ಕಾರ 5 ಕೋಟಿ ರುಪಾಯಿ ಆರ್ಥಿಕ ನೆರವು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಜಯಮಾಲಾ ತಿಳಿಸಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್, ನಟರಾದ ರಾಘವೇಂದ್ರ ರಾಜ್ ಕುಮಾರ್, ರವಿಚಂದ್ರನ್, ಬಿ.ಸರೋಜಾದೇವಿ, ಜಯಂತಿ, ಶ್ರುತಿ, ಸಂಗೀತ ನಿರ್ದೇಶಕ ಹಂಸಲೇಖ ಮುಂತಾದವರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ಚಿತ್ರವಾರ್ತೆ)

ಪೂರಕ ಓದಿಗೆ
ಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ
ಕನ್ನಡ ಸಿನಿಮಾ 75ಕ್ಕೆ 75ಪುಸ್ತಕ: ಜಯಮಾಲಾ
ಕನ್ನಡ ಚಿತ್ರರಂಗಕ್ಕೆ 15 ದಿನಗಳ ರಜೆ ಬೇಕೆ?

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada