For Quick Alerts
  ALLOW NOTIFICATIONS  
  For Daily Alerts

  ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಹೈಕೋರ್ಟ್ ತಡೆಯಾಜ್ಞೆ

  By Rajendra
  |

  2010-11ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳಿಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ. ಚಲನಚಿತ್ರಗಳ ಆಯ್ಕೆಯಲ್ಲಿ ಭಾರಿ ಗೋಲ್‌ಮಾಲ್ ನಡೆದಿರುವ ಸಾಧ್ಯತೆ ಇದೆ ಎಂದು ಆರೋಪಿಸಿ ನಟಿ ಪ್ರಿಯಾ ಹಾಸನ್ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

  ಈ ಸಂಬಂಧ ಹೈಕೋರ್ಟ್ ಚಲನಚಿತ್ರ ಪ್ರಶಸ್ತಿಗಳನ್ನು ತಡೆಹಿಡಿಯುವಂತೆ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಗೆ ನೋಟೀಸ್ ಜಾರಿ ಮಾಡಿದೆ. ಚಲನಚಿತ್ರ ಆಯ್ಕೆ ಸಮಿತಿಯ ಸದ್ಯಸ್ಯರಾಗಿರುವ ಅಶೋಕ್ ಕಶ್ಯಪ್ ಛಾಯಾಗ್ರಹಣದ 'ಸೂಪರ್' ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾಗಿತ್ತು.

  ಆದರೆ ನಿಯಮಗಳ ಪ್ರಕಾರ, ಆಯ್ಕೆ ಸಮಿತಿ ಸದಸ್ಯರ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡುವಂತಿಲ್ಲ. ಹೀಗಿದ್ದೂ 'ಸೂಪರ್' ಚಿತ್ರವನ್ನು ಅತ್ಯುತ್ತಮ ಪ್ರಶಸ್ತಿಗೆ ಹೇಗೆ ಆಯ್ಕೆ ಮಾಡಿದರು ಎಂದು ಪ್ರಶ್ನಿಸಿರುವ ಪ್ರಿಯಾ ಹಾಸನ್, ಈ ಬಗ್ಗೆ ವಿಚಾರಣೆ ನಡೆಸುವಂತೆ ಕೋರಿದ್ದಾರೆ. (ಒನ್‌ಇಂಡಿಯಾ ಕನ್ನಡ)

  English summary
  The Karnataka High Court stayed the 2010-11 state film awards. The stay was granted in connection with a petition filed by film maker Priya Hasan.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X