ಶಂಕರ್‌ನಾಗ್ ಚಿತ್ರಮಂದಿರ, ಜೆಪಿ ನಗರದಲ್ಲಿ ದಾಖಲೆ ಬರೆದ ಡಿ ಬಾಸ್ ಕಟೌಟ್
ರಾಬರ್ಟ್ ಸಿನಿಮಾ ಕ್ರೇಜ್ ದಿನೇ ದಿನೇ ಹೆಚ್ಚುತ್ತಿದೆ. ರಿಲೀಸ್‌ಗೂ ಮುಂಚೆ ಕಲೆಕ್ಷನ್ ವಿಚಾರದಲ್ಲಿ ಭಾರಿ ಸದ್ದು ಮಾಡ್ತಿದೆ. ಕರ್ನಾಟಕದ ವಿತರಣೆ ಹಕ್ಕು 78 ಕೋಟಿಗೆ ಸೇಲ್ ಆಗಿದೆ ಎಂದು ಹೇಳಲಾಗಿದೆ. ಡಿಜಿಟಲ್ ಹಕ್ಕು, ಆಡಿಯೋ ಹಕ್ಕು ಸೇರಿದ್ರೆ ನೂರು ಕೋಟಿ ಬಿಸಿನೆಸ್ ಮಾಡಿದೆ ಎನ್ನಲಾಗಿದೆ.
ಮಾರ್ಚ್ 11 ರಂದು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಹಲವು ಕಡೆ ರಾಬರ್ಟ್ ಸಿನಿಮಾ ರಿಲೀಸ್ ಆಗುತ್ತಿದ್ದು, ಭರ್ಜರಿ ಸಿದ್ಧತೆ ನಡೆದಿದೆ.
ವಿಶೇಷ ಅಂದ್ರೆ ಬೆಂಗಳೂರಿನ ಎಂ ಜಿ ರಸ್ತೆಯಲ್ಲಿರುವ ಶಂಕರ್ ನಾಗ್ ಚಿತ್ರಮಂದಿರಲ್ಲಿ ಅದಾಗಲೇ ದರ್ಶನ್ ಅವರ ಕಟೌಟ್ ಹಾಕಲಾಗಿದೆ. ಸ್ಯಾಂಡಲ್‌ವುಡ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಂಕರ್ ನಾಗ್ ಥಿಯೇಟರ್ ಮುಂದೆ ಕನ್ನಡ ನಟನ ಕಟೌಟ್ ನಿಲ್ಲಿಸಲಾಗಿದೆ ಎಂಬ ಮಾಹಿತಿ ಇದೆ.

ಥಿಯೇಟರ್ ಮುಂದೆ ಹಾಕಿರುವ ಚಾಲೆಂಜಿಂಗ್ ಸ್ಟಾರ್ ಅವರ ಕಟೌಟ್ ಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಬೆಂಗಳೂರಿನ ಜೆಪಿ ನಗರದಲ್ಲಿರುವ ಸಿದ್ದೇಶ್ವರ ಚಿತ್ರಮಂದಿರದ ಎದುರು ದರ್ಶನ್ ಅವರ 13 ಕಟೌಟ್ ನಿಲ್ಲಿಸಲಾಗುತ್ತಿದೆ. ಇದಕ್ಕೂ ಮುಂಚೆ ಪುನೀತ್ ರಾಜ್ ಕುಮಾರ್ ಅಭಿನಯದ 'ದೊಡ್ಮನೆ ಹುಡ್ಗ' ಚಿತ್ರಕ್ಕಾಗಿ ಅದೇ ಚಿತ್ರಮಂದಿರ ಎದುರು ಹತ್ತು ಕಟೌಟ್ ಹಾಕಿದ್ದರು.

ಮಾರ್ಚ್ 11 ರಂದು ರಾಬರ್ಟ್ ಸಿನಿಮಾ ತೆಲುಗು ಮತ್ತು ಕನ್ನಡದಲ್ಲಿ ಬಿಡುಗಡೆಯಾಗುತ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಚಿತ್ರವನ್ನು ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಿಸಿದ್ದಾರೆ. ಆಶಾ ಭಟ್, ವಿನೋದ್ ಪ್ರಭಾಕರ್, ಜಗಪತಿ ಬಾಬು ಸೇರಿದಂತೆ ಹಲವರು ನಟಿಸಿದ್ದಾರೆ.


Click it and Unblock the Notifications











