For Quick Alerts
  ALLOW NOTIFICATIONS  
  For Daily Alerts

  ಮುಖ್ಯಮಂತ್ರಿಗಳಿಂದ ಶೀಘ್ರದಲ್ಲೇ ಸೂಪರ್ ವೀಕ್ಷಣೆ

  By Rajendra
  |

  ಸದಾ ರಾಜಕೀಯದ ಜಂಜಾಟದಲ್ಲಿ ಮುಳುಗಿ ಹೋಗಿರುವ ಕರ್ನಾಟಕದ ರಾಜಕಾರಣಿಗಳು ಈಗ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಉಪೇಂದ್ರ ನಟಿಸಿ, ನಿರ್ದೇಶಿಸಿರುವ 'ಸೂಪರ್' ಚಿತ್ರವನ್ನು ವೀಕ್ಷಿಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರೇ ಸ್ವತಃ ಈ ವಿಷಯವನ್ನು ಉಪೇಂದ್ರ ಅವರಲ್ಲಿ ಹೇಳಿಕೊಂಡಿದ್ದಾರೆ.

  ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳು ಹಾಗೂ ಪಕ್ಷದ ಪ್ರಮುಖರೊಂದಿಗೆ 'ಸೂಪರ್' ಚಿತ್ರವನ್ನು ವೀಕ್ಷಿಸುವುದಾಗಿ ಸಿ.ಎಂ ಯಡಿಯೂರಪ್ಪ ತಿಳಿಸಿದ್ದಾರೆ. ಸಂಕ್ರಾಂತಿ ಹಬ್ಬಕ್ಕಾಗಿ ಖಾಸಗಿ ವಾಹಿನಿಯೊಂದಕ್ಕೆ ಉಪೇಂದ್ರ ಅವರು ಮುಖ್ಯಮಂತ್ರಿಗಳನ್ನು ಸಂದರ್ಶನ ಮಾಡುವುದಕ್ಕೆ ತೆರಳಿದ ಸಮಯದಲ್ಲಿ ಮುಖ್ಯಮಂತ್ರಿಗಳು ಈ ವಿಷಯವನ್ನು ಪ್ರಸ್ತಾಪಿಸಿದರು.

  ಅಲ್ಲದೆ ನಿಮ್ಮ ಚಿತ್ರದ ಬಗ್ಗೆ ಬಹಳ ಜನರಿಂದ ಪ್ರಶಂಸೆ ಮಾತು ಕೇಳಿದ್ದೇನೆ. ಒಳ್ಳೆಯ ಪ್ರಯತ್ನ ಮಾಡಿದ್ದೀರಿ ಎಂದು ಎಲ್ಲರೂ ಹೇಳಿದ್ದಾರೆ. ನಿಮ್ಮ ಸಿನಿಮಾ ನೋಡುವ ಆಸಕ್ತಿಯಿದೆ. ಆದಷ್ಟು ಬೇಗ ವೀಕ್ಷಿಸುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸೂಪರ್ ಬಗ್ಗೆ ಮುಖ್ಯಮಂತ್ರಿಗಳ ಪ್ರತಿಕ್ರಿಯೆ ಹೇಗಿರುತ್ತದೆ ಎಂಬ ಕುತೂಹಲ ಮನೆಮಾಡಿದೆ. [ಸೂಪರ್]

  English summary
  Karnataka Chief Minister B S Yeddyurappa intends to watch successfully running Kannada movie Super with his colleagues. Recently he spoke with Upendra and expressed his desire to watch the movie. Upendra has interviewed Mr CM for a private TV channel for Sankranti special programme.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X