»   » ಕಂಠೀರವ ಸ್ಟುಡಿಯೋದಲ್ಲಿ ಸಂಜೆ 5ಕ್ಕೆ ರಾಜ್‌ಅಂತ್ಯಕ್ರಿಯೆ

ಕಂಠೀರವ ಸ್ಟುಡಿಯೋದಲ್ಲಿ ಸಂಜೆ 5ಕ್ಕೆ ರಾಜ್‌ಅಂತ್ಯಕ್ರಿಯೆ

Subscribe to Filmibeat Kannada

ಬೆಂಗಳೂರು : ವರನಟ ಡಾ.ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆಯನ್ನು ನಗರದ ಕಂಠೀರವ ಸ್ಟುಡಿಯೋದಲ್ಲಿ ಸಂಜೆ 5ಗಂಟೆಗೆ ಏರ್ಪಡಿಸಲಾಗಿದೆ.

ಎಲ್ಲಾ ಸರ್ಕಾರಿ ಗೌರವಗಳೊಂದಿಗೆ ರಾಜ್‌ ಅಂತಿಮಯಾತ್ರೆ ನೆರವೇರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಅಂತ್ಯಕ್ರಿಯೆಯಲ್ಲಿ ಚಿತ್ರೋದ್ಯಮದ ಗಣ್ಯರು, ಸಾಹಿತ್ಯಲೋಕದ ದಿಗ್ಗಜರು, ರಾಜಕೀಯ ಪ್ರಮುಖರು ಸೇರಿದಂತೆ ಅನೇಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ರಾಜ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 12ಗಂಟೆ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಶೋಕ : ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಿ, ವರನಟನ ನಿಧನಕ್ಕೆ ರಾಜ್ಯ ಸಂತಾಪ ವ್ಯಕ್ತಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

Post your views

ಮುಖಪುಟ / ಸ್ಯಾಂಡಲ್‌ವುಡ್‌

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada