twitter
    For Quick Alerts
    ALLOW NOTIFICATIONS  
    For Daily Alerts

    ಸಿನಿಪ್ರಿಯರಿಗೆ ಸಿಹಿ ಸುದ್ದಿ: ಮಾರ್ಚ್ 24ರಿಂದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

    |

    13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 24 ರಿಂದ 31 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಬಾರಿ 'ಭಾರತೀಯ ಪ್ರದರ್ಶನ ಕಲೆಗಳ ಮಹತ್ವ' ವಿಷಯದ ಮೇಲೆ ಚಿತ್ರೋತ್ಸವ ನಡೆಯಲಿದೆ.

    ಭಾರತದ ಪ್ರತಿಷ್ಠಿತ ಚಿತ್ರೋತ್ಸವವಾಗಿ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಬೆಳೆದು ಬಂದಿದ್ದು, ಈಗಾಗಲೇ ದೇಶ-ವಿದೇಶಗಳಲ್ಲಿ ಪ್ರಸಿದ್ದಿ ಪಡೆದಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಂತಾರಾಷ್ಟ್ರೀಯ FIAPF ಮಾನ್ಯತೆ ದೊರೆಯುವ ಸಾಧ್ಯತೆಗಳಿದ್ದು, ಇದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

    ಈ ಬಾರಿಯ ಚಿತ್ರೋತ್ಸವ ಕೋವಿಡ್ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳಿಗನುಸಾರವಾಗಿ ನಡೆಯಬೇಕೆಂದು ಸಿಎಂ ಇದೇ ಸಂದರ್ಭದಲ್ಲಿ ಸೂಚಿಸಿದ್ದಾರೆ.

    13th Bangalore International film Festival to be held from March 24th

    ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್ ನ ಪಿವಿಆರ್ ಚಿತ್ರಮಂದಿರದ 11 ಪರದೆಗಳಲ್ಲಿ ಒಟ್ಟಾರೆ 50ಕ್ಕೂ ಹೆಚ್ಚು ದೇಶಗಳ ಸುಮಾರು 200 ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಸಭೆಯ ಬಳಿಕ ತಿಳಿಸಿದ್ದಾರೆ.

    Recommended Video

    ಶಿವಣ್ಣನ ಮಾತಿಗೆ ವಿರುದ್ಧವಾಗಿ ನಡೆದುಕೊಂಡ ಧ್ರುವ ಸರ್ಜಾ | Filmibeat Kannada

    ಬೆಂಗಳೂರು ನಗರದಲ್ಲಿ ಏಳು ದಿನಗಳ ಕಾಲ ನಡೆಯುವ ಚಲನಚಿತ್ರೋತ್ಸವದಲ್ಲಿ ಏಷಿಯನ್ ಸಿನಿಮಾ, ಚಿತ್ರಭಾರತಿ (ಭಾರತೀಯ ಸಿನಿಮಾ) ಹಾಗೂ ಕನ್ನಡ ಸಿನಿಮಾಗಳ ಸ್ಪರ್ಧಾ ವಿಭಾಗವಿರುತ್ತದೆ. ಅಲ್ಲದೆ, ವಿಶ್ವಸಿನಿಮಾ, ಸಿಂಹಾವಲೋಕನ, ಗ್ರ್ಯಾಂಡ್ ಕ್ಲಾಸಿಕ್, ಕೆಲವು ದೇಶಗಳ ವಿಶೇಷ ಸಿನಿಮಾ, ಅಗಲಿದ ವಿಶ್ವದ, ಭಾರತದ ಮತ್ತು ಕನ್ನಡ ಚಿತ್ರರಂಗದ ಗಣ್ಯರ ಸಂಸ್ಮರಣೆ, ಚಲನಚಿತ್ರ ವಿಮರ್ಶಕರ ಅಂತಾರಾಷ್ಟ್ರೀಯ ಒಕ್ಕೂಟದ ಪ್ರಶಸ್ತಿ ವಿಭಾಗ, ನೆಟ್‌ಪ್ಯಾಕ್‌, ಜೀವನಚರಿತ್ರೆ ಆಧರಿಸಿದ ಚಿತ್ರಗಳ ವಿಭಾಗಗಳು ವಿವಿಧ ದೃಷ್ಟಿಕೋನವನ್ನು ಬಿಂಬಿಸಲಿವೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ವಿವರಿಸಿದರು.

    English summary
    13th bangalore international film festival to be held from March 24th.
    Saturday, February 20, 2021, 9:40
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X