For Quick Alerts
  ALLOW NOTIFICATIONS  
  For Daily Alerts

  13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ!

  |

  13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಮಾರ್ಚ್​ 3) ಸಂಜೆ ಚಾಲನೆ ನೀಡಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್​, ರಾಜೀವ್ ಚಂದ್ರಶೇಖರ್​ ಅವರು ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿಶೇಷ ಅತಿಥಿಯಾಗಿ ಭಾರತಿ ವಿಷ್ಣುವರ್ಧನ್ ಭಾಗಿಯಾಗಿದ್ದರು. ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಸೇರಿದಂತೆ ಹಲವು ಗಣ್ಯರು ಇದ್ದರು.

  ಇನ್ನು ಉದ್ಘಾಟನಾ ಸಮಾರಂಭದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ, ಕನ್ನಡ ಚಿತ್ರನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಪ್ರಿಯದರ್ಶನ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಡಾ. ಪಿ ಎಸ್ ಹರ್ಷ ಭಾಗವಹಿಸಿದ್ದರು.

  ಕಿರೀಟಿ ರೆಡ್ಡಿಗೆ ಸಿಕ್ಕಳು ನಾಯಕಿ, ಅವಳೇ ಕಿಸ್ ಬೆಡಗಿ ಶ್ರೀಲೀಲಾ!ಕಿರೀಟಿ ರೆಡ್ಡಿಗೆ ಸಿಕ್ಕಳು ನಾಯಕಿ, ಅವಳೇ ಕಿಸ್ ಬೆಡಗಿ ಶ್ರೀಲೀಲಾ!

  ಈ ಬಾರಿ 55 ರಾಷ್ಟ್ರಗಳ 200ಕ್ಕೂ ಹೆಚ್ಚು ಸಿನಿಮಾಗಳು ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಮಾರ್ಚ್ 10ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಉದ್ಘಾಟನಾ ಚಿತ್ರವಾಗಿ ಗ್ರೀಸ್​ನ 'ಟೈಲರ್​' ಸಿನಿಮಾ ಪ್ರದರ್ಶನಗೊಂಡಿದೆ. ಸೋನಿಯಾ ಲಿಸಾ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಬಾರಿಯೂ ಕೂಡ ಬೆಂಗಳೂರಿನ ರಾಜಾಜಿನಗರದಲ್ಲಿ ಇರುವ ಒರಾಯನ್​ ಮಾಲ್​ನಲ್ಲಿ ಸಿನಿಮೋತ್ಸವ ನಡೆಯಲಿದೆ. ಈಗಾಗಲೇ ಯಾವ ಸಿನಿಮಾ ಯಾವ ಸಮಯದಲ್ಲಿ ಪ್ರದರ್ಶನ ಕಾಣುತ್ತಿದೆ ಎನ್ನುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

  ಈ ಬಾರಿಯ ಸಿನಿಮೋತ್ಸವದಲ್ಲಿ ನಟ ಪುನೀತ್​ ರಾಜ್​ಕುಮಾರ್ ಅವರಿಗೆ ವಿಶೇಷ ಗೌರವ ಸಲ್ಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಿನಿಮೋತ್ಸವ ಚಾಲನೆ ವೇಳೆ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್​ ಅವರಿಗೆ ನಮನ ಸಲ್ಲಿಸಿ, ಫಿಲ್ಮ್​ ಫೆಸ್ಟಿವಲ್ ಆರಂಭ ಮಾಡಿದಲಾಯಿತು. ಅಷ್ಟೇ ಅಲ್ಲ ಚಿತ್ರೋತ್ಸವದ ಭಾಗವಾಗಿ ಅಪ್ಪು ಅವರ ಬಗ್ಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

  English summary
  13th Bengaluru International Film Festival Begins,
  Friday, March 4, 2022, 9:47
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X