For Quick Alerts
  ALLOW NOTIFICATIONS  
  For Daily Alerts

  ಇನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಅಣ್ಣಾ ಬಾಂಡ್

  By Rajendra
  |

  ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಅಣ್ಣಾ ಬಾಂಡ್ ಚಿತ್ರ ಹೊಸ ದಾಖಲೆ ನಿರ್ಮಿಸಲು ಮುಂದಾಗಿದೆ. ವರನಟ ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲು ಸಿದ್ಧವಾಗುತ್ತಿರುವ ಅಣ್ಣಾ ಬಾಂಡ್ ದಾಖಲೆ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

  ಅಣ್ಣಾ ಬಾಂಡ್ ಚಿತ್ರವನ್ನು ಏಪ್ರಿಲ್ 24ಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿರುವ ಚಿತ್ರದ ವಿತರಕ ಪ್ರಸಾದ್, "ಎಷ್ಟು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತದೆ ಎಂದು ಮೊದಲೇ ಊಹಿಸಲು ಸಾಧ್ಯವಿಲ್ಲ. ಬಹುಶಃ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬಹುದು" ಎಂದಿದ್ದಾರೆ.

  ಸದ್ಯಕ್ಕೆ ಚಿತ್ರಮಂದಿರಗಳ ಹುಡುಕಾಟಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಚಿತ್ರದ ಮೇಕಿಂಗ್ ಬಗ್ಗೆಯೂ ವಿಡಿಯೋ ಮಾಡಲಾಗುತ್ತಿದೆ. ನಿಧಿ ಸುಬ್ಬಯ್ಯ, ಪ್ರಿಯಾಮಣಿ, ಜಾಕಿ ಶ್ರಾಫ್ ಚಿತ್ರದ ತಾರಾಗಣದಲ್ಲಿದ್ದಾರೆ. (ಏಜೆನ್ಸೀಸ್)

  English summary
  Power Star Puneet Rajkumar lead Kannada movie Anna Bond to be release in 200 plus theaters. Prasad has taken the distribution rights of the film. He says that Anna Bond will have the biggest release.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X