»   » ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿಮ್ಹಾನ್ಸ್‌ಗೆ ಶಿಫ್ಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿಮ್ಹಾನ್ಸ್‌ಗೆ ಶಿಫ್ಟ್

Posted By:
Subscribe to Filmibeat Kannada

ಕೆಲದಿನಗಳಿಂದ ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಶಿಫ್ಟ್ ಆಗಲಿದ್ದಾರೆ. ಮಾನಸಿಕವಾಗಿ ಅಸ್ವಸ್ಥರಾಗಿರುವ ದರ್ಶನ್‌ ಅವರಿಗೆ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯ ಸೈಕಿಯಾಟ್ರಿ ವಿಭಾಗ ದರ್ಶನ್ ಅವರಿಗೆ ಕಂಡೀಷನ್ ಬಗ್ಗೆ ವಿವರ ನೀಡುವಂತೆ ನಿಮ್ಹಾನ್ಸ್ ಆಸ್ಪತ್ರೆ ವೈದ್ಯರಿಗೆ ಪತ್ರ ಬರೆಯಲಿದೆ. ನಿಮ್ಹಾನ್ಸ್‌ನಲ್ಲಿ ದರ್ಶನ್ ಅವರ ಮಾನಸಿಕ ಸ್ಥಿತಿಯನ್ನು ಪರೀಕ್ಷಿಸಲಾಗುತ್ತದೆ.

ಪೊಲೀಸರ ಸಮ್ಮುಖದಲ್ಲಿ ದರ್ಶನ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏತನ್ಮಧ್ಯೆ ಪತ್ನಿಯ ಮೇಲೆ ದೌರ್ಜನ್ಯ ಮಾಡಿದ ದರ್ಶನ್ ಚಿತ್ರಗಳನ್ನು ನಿಷೇಧಿಸಬೇಕು ಎಂಬ ಕೂಗು ಕೇಳಿಬಂದಿದೆ. ಜಾಂಡೀಸ್ ಹಾಗೂ ಅಸ್ತಮಾದಿಂದ ಬಳಲುತ್ತಿರುವ ದರ್ಶನ್‌ಗೆ ರಾಜೀವ್‌ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. (ಏಜೆನ್ಸೀಸ್)

English summary
Actor Darshan who was arrested for charges of harassing and battering his wife Vijaya Lakshmi to be shifting from Rajiv Gandhi Institute of Chest Disease to NIMHANS. The Psychiatry Department of Victoria Hospital is going to write a letter to NIMHAS doctors asking them to take up a psychiatric evaluation of the actor.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada