»   »  ಅಂಬಿ ಮತ್ತು ಜಯಮಾಲಾ ಚುನಾವಣೆಗೆ ಸ್ಪರ್ಧೆ?

ಅಂಬಿ ಮತ್ತು ಜಯಮಾಲಾ ಚುನಾವಣೆಗೆ ಸ್ಪರ್ಧೆ?

Subscribe to Filmibeat Kannada
Ambarish and Jayamala to contest elections?
15ನೇ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕನ್ನಡ ಚಿತ್ರೋದ್ಯಮ ಬಿರುಸಿನ ಚಟುವಟಿಕೆಗಳ ತಾಣವಾಗುತ್ತಿದೆ. ಬಹಳಷ್ಟು ಸಿನಿಮಾ ಕಲಾವಿದರು ರಾಜಕೀಯಕೆ ಧುಮುಕುವ ಸಾಧ್ಯತೆಗಳಿವೆ. ಚುನಾವಣೆಗೆ ಸ್ಪರ್ಧಿಸುವವರ ಪಟ್ಟಿಯಲ್ಲಿ ನಟ ಅಂಬರೀಶ್ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಪ್ರಮುಖರಾಗಿದ್ದಾರೆ.

ಬಿಜೆಪಿಯೊಂದಿಗಿನ ಮಾತುಕತೆ ಯಶಸ್ವಿಯಾಗಿದ್ದೇ ಆದರೆ, ಅಂಬರೀಶ್ ಮತ್ತು ಜಯಮಾಲಾ ಅವರಿಗೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆಗಳಿವೆ. ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಅಂಬರೀಶ್ ಕಾಂಗ್ರೆಸ್ ಪಕ್ಷವನ್ನು ತೊರೆಯುವ ಸಿದ್ದ್ಧತೆಯಲ್ಲಿದ್ದಾರೆ. ಮೊದಲು ಜನತಾದಳದಲ್ಲಿದ್ದ ಅಂಬರೀಶ್ ನಂತರ ಕಾಂಗ್ರೆಸ್ ಕೈ ಹಿಡಿದಿದ್ದರು. ಈಗ ಕಮಲದ ತೆಕ್ಕೆಗೆ ಬೀಳುವ ತವಕದಲ್ಲಿದ್ದಾರೆ.

ಒಂದು ಮೂಲಗಳ ಪ್ರಕಾರ ಅಂಬರೀಶ್ ಅವರು ಬೆಂಗಳೂರು ಕೇಂದ್ರ ಮತ್ತು ಜಯಮಾಲಾ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?
ರಾಜಕೀಯಕ್ಕೆ ನಿರ್ದೇಶಕ ಪ್ರೇಮ್ ಪ್ರವೇಶ ಸಾಧ್ಯತೆ

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada