»   » ಕಲಾವಿದರ ಸಂಘದ ಅಂಬಿಗ ಅಂಬರೀಶ್

ಕಲಾವಿದರ ಸಂಘದ ಅಂಬಿಗ ಅಂಬರೀಶ್

Subscribe to Filmibeat Kannada
Ambarish elected as KCAA president
ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾಗಿ ರೆಬಲ್ ಸ್ಟಾರ್ ಅಂಬರೀಶ್ ಎರಡನೆಯ ಬಾರಿಗೆ ಆಯ್ಕೆಯಾಗಿದ್ದಾರೆ. ಭಾನುವಾರ(ಡಿ.14) ಬೆಂಗಳೂರಿನ ಆರ್.ವಿ.ಕಾಲೇಜು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕರ್ನಾಟಕ ಚಲನಚಿತ್ರ ಕಲಾವಿದರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಚುನಾವಣೆ ನಡೆಸಿ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಯಾವುದೇ ಚುನಾವಣೆ ಇಲ್ಲದೆ ಅಧ್ಯಕ್ಷರು ಸೇರಿದಂತೆ ಎಲ್ಲ ಸ್ಥಾನಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಅಂಬರೀಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಡಾ.ವಿಷ್ಣುವರ್ಧನ್ ಮತ್ತು ಬಿ.ಸರೋಜಾದೇವಿ ಗೌರವ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಟರಾದ ರವಿಚಂದ್ರನ್, ಶಿವರಾಜ್ ಕುಮಾರ್, ಉಪೇಂದ್ರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ರಾಕ್ ಲೈನ್ ವೆಂಕಟೇಶ್, ರಾಘವೇಂದ್ರ ರಾಜ್ ಕುಮಾರ್, ಶ್ರೀನಿವಾಸ ಮೂರ್ತಿ, ಜೈಜಗದೀಶ್ ಮುಂತಾದವರು ಕಾರ್ಯನಿರ್ವಹಿಸಲಿದ್ದಾರೆ.

ಖಜಾಂಚಿಯಾಗಿ ಹಿರಿಯ ನಟ ಶಿವರಾಮ್, ದೊಡ್ಡಣ್ಣ ಅವರಿಗೆ ನೂತನ ಕಟ್ಟಡದ ಉಸ್ತುವಾರಿಯನ್ನು ವಹಿಸಲಾಗಿದೆ. ಗೌರವ ಸಲಹೆಗಾರರಾಗಿ ಹಿರಿಯ ಕಲಾವಿದರಾದ ಶ್ರೀನಾಥ್ ಮತ್ತು ಜಯಂತಿ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದಂತೆ ತಾರಾ, ಅನು ಪ್ರಭಾಕರ್, ವಿಜಯ್,ರಂಗಾಯನ ರಘು, ಸಾಧು ಕೋಕಿಲ ಮುಂತಾದ ಕಲಾವಿದರು ಕಾರ್ಯಕಾರಿ ಸಮಿತಿಯಲ್ಲಿದ್ದಾರೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada