»   » ಬಾಗಲಕೋಟೆಯಲ್ಲಿ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಬಾಗಲಕೋಟೆಯಲ್ಲಿ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ

Subscribe to Filmibeat Kannada


ಬೆಂಗಳೂರು : ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ.23ರಂದು ಬಾಗಲಕೋಟೆಯಲ್ಲಿ ಏರ್ಪಡಿಸಲಾಗಿದೆ.

ಪ್ರತ್ಯೇಕ ಜಿಲ್ಲೆಯಾಗಿ ಬಾಗಲಕೋಟೆ ರೂಪುಗೊಂಡ ನಂತರ ಯಾವುದೇ ಬೃಹತ್‌ ಕಾರ್ಯಕ್ರಮಗಳು ಇಲ್ಲಿ ನಡೆದಿರಲಿಲ್ಲ. ಬಾಗಲಕೋಟೆಗೆ ಭೇಟಿ ನೀಡಿದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಅಧಿಕಾರಿಗಳು, ಕಾರ್ಯಕ್ರಮದ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಕಾರ್ಯಕ್ರಮ ಏರ್ಪಡಿಸಿರುವ ಸರ್ಕಾರದ ಕ್ರಮವನ್ನು ಉತ್ತರ ಕರ್ನಾಟಕದ ಚಿತ್ರಪ್ರೇಮಿಗಳು ಸ್ವಾಗತಿಸಿದ್ದಾರೆ. ಸಮಾರಂಭದಲ್ಲಿ ರವಿಚಂದ್ರನ್‌, ಶಿವರಾಜ್‌ ಕುಮಾರ್‌ ಸೇರಿದಂತೆ ತಾರಾಬಳಗ ಪಾಲ್ಗೊಳ್ಳಲಿದೆ.

(ದಟ್ಸ್‌ ಕನ್ನಡ ವಾರ್ತೆ)

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada