»   » ಜನವರಿಯಲ್ಲಿ ಚಲನಚಿತ್ರ ಪ್ರಶಸ್ತಿ ಪ್ರದಾನ

ಜನವರಿಯಲ್ಲಿ ಚಲನಚಿತ್ರ ಪ್ರಶಸ್ತಿ ಪ್ರದಾನ

Posted By:
Subscribe to Filmibeat Kannada

2007-08ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಸಮಾರಂಭವನ್ನು ಜನವರಿಯಲ್ಲಿ ಬೆಂಗಳೂರಿನಲ್ಲೇ ನಡೆಸಲಾಗುವುದು ಎಂದು ವಾರ್ತಾ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೈಬಿಡಲಾಗಿದೆ ಎಂದು ಸುದ್ದಿಗಾರರಿಗೆ ಅವರು ಗುರುವಾರ ತಿಳಿಸಿದರು.

ಪ್ರಶಸ್ತಿಗಳ ಆಯ್ಕೆ ಕಳೆದ ಜನವರಿಯಲ್ಲೆ ನಡೆದಿದ್ದು ಪ್ರದಾನ ಮಾಡುವ ಕಾರ್ಯಕ್ರಮ ಮಾತ್ರ ಬಾಕಿ ಉಳಿದಿದೆ. ಈ ವರ್ಷದ ಪ್ರಶಸ್ತಿಗೆ ಚಿತ್ರಗಳನ್ನು ಆಯ್ಕೆ ಮಾಡಲು ಸಮಿತಿ ರಚಿಸಲು ಸರಕಾರ ಉದ್ದೇಶಿಸಿದೆ. ಶೀಘ್ರದಲ್ಲೇ ಇದಕ್ಕೆ ಒಪ್ಪಿಗೆ ನೀಡಲಾಗುತ್ತದೆ ಎಂದು ಕಟ್ಟಾ ತಿಳಿಸಿದರು.

ನೂತನ ಚಲನಚಿತ್ರ ನೀತಿಯನ್ನು ಸರಕಾರ ರಚಿಸಲಿದ್ದು ಯಾವ ರೀತಿ ಸಿನಿಮಾ ನೀತಿ ರಚನೆಯಾಗಬೇಕು ಎಂಬ ಬಗ್ಗೆ ಸದ್ಯದಲ್ಲಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಟ್ಟಾ ತಿಳಿಸಿದರು. ಹಾಗೆಯೇ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ರಚನೆ ಕುರಿತು ಮುಖ್ಯಮಂತ್ರಿಗಳಿಗೆ ಈಗಾಗಲೇ ಶಿಫಾರಸು ಕಳುಹಿಸಲಾಗಿದೆ. ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಖ್ಯಾತ ನಿರ್ದೇಶಕ ಭಾರ್ಗವ ಹೆಸರು ಕೇಳಿಬಂದಿದೆ.

2007-08ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪಟ್ಟಿ

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada