ಸಾಹಿತ್ಯ ಸಮ್ಮೇಳನಕ್ಕೆ ಪಾರ್ವತಮ್ಮ, ಶ್ರೀನಾಥ್, ಉಪೇಂದ್ರ
ಶಿವಮೊಗ್ಗ : ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್, ನಗರದಲ್ಲಿ ನಡೆಯಲಿರುವ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್, ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ಪ್ರಕಟಿಸಿದರು.
ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ಡಾ.ರಾಜ್‌ಕುಮಾರ್ ವೇದಿಕೆ ನಿರ್ಮಾಣ ಮಾಡಿರುವುದರಿಂದ, ಪಾರ್ವತಮ್ಮ ರಾಜ್‌ಕುಮಾರ್ ಅವರನ್ನು ಕಸಾಪ ಕೇಂದ್ರ ಸಮಿತಿ ಸಮ್ಮೇಳನಕ್ಕೆ ಆಹ್ವಾನಿಸಿದೆ. ಈ ಹಿನ್ನೆಲೆಯಲ್ಲಿ ಅವರು ಸಮ್ಮೇಳನದ ಉದ್ಘಾಟನೆ ಅಥವಾ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವ ಆಶಯ ವ್ಯಕ್ಯಪಡಿಸಿದ್ದಾರೆ ಎಂದು ಅವರು ತಿಳಿಸಿದರು.
ತಾರಾದಂಡು : ಚಿತ್ರನಟರಾದ ಸುದೀಪ್, ಶ್ರೀನಾಥ್, ಉಪೇಂದ್ರ, ಶಿವರಾಜ್ ಕುಮಾರ್, ಸೇರಿದಂತೆ ಹಲವು ತಾರೆಯರು, ‘ಅಕ್ಕ’ ಬಳಗದ ಶಾರದಾ ಬೈಯಣ್ಣ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications