ದರ್ಶನ್ ಸಾರಥಿಗೆ ಶೀಘ್ರದಲ್ಲೆ ಬಿಡುಗಡೆ ಭಾಗ್ಯ
ಸುದೀರ್ಘ ಸಮಯದಿಂದ ಸಾರಥಿ ಚಿತ್ರದ ಚಿತ್ರೀಕರಣ ನಡೆಯುತ್ತಲೇ ಇತ್ತು. ಕಡೆಗೂ ಈ ಚಿತ್ರಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಕೆ.ವಿ.ಸತ್ಯಪ್ರಕಾಶ್ ಅವರು ನಿರ್ಮಿಸುತ್ತಿರುವ 'ಸಾರಥಿ' ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಸೀಡಿಗಳು ಕೇಳುಗರಿಗೆ ಮೆಚ್ಚುಗೆಯಾಗಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಸ್ವದೇಶ ಹಾಗೂ ವಿದೇಶಗಳಲ್ಲಿ 'ಸಾರಥಿ' ಚಿತ್ರದ ಚಿತ್ರೀಕರಣ ನಡೆದಿದೆ. ಆರ್ಟ್ಸ್ ಲಾಂಛನದಲ್ಲಿ ಕೆ.ಸಿ.ಎನ್ ಚಂದ್ರಶೇಖರ್ ಅವರು ನಿರ್ಮಿಸುತ್ತಿರುವ 'ಸಾರಥಿ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.
ದಿನಕರ್‌ತೂಗುದೀಪ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣರ ಸಂಗೀತವಿದೆ. ಕೆ.ಕೃಷ್ಣಕುಮಾರ್ ಛಾಯಾಗ್ರಹಣ, ರವಿವರ್ಮ, ಪಳನಿರಾಜ್ ಸಾಹಸ, ಮದನ್ ಹರಿಣಿ, ಹರ್ಷ ಹಾಗೂ ರಾಮು ನೃತ್ಯ, ದಿನಕರ್ ತೂಗುದೀಪ ಮತ್ತು ಚಿಂತನ್ ಕಥೆ ಹಾಗೂ ಮೂರ್ತಿ ಅವರ ನಿರ್ಮಾಣ ನಿರ್ವಹಣೆಯಿರುದೆ. ಚಿತ್ರದ ತಾರಾಬಳಗದಲ್ಲಿ ದರ್ಶನ್, ದೀಪು, ರಂಗಾಯಣರಘು, ಲೋಹಿತಾಶ್ವ, ಅಜಯ್, ಬುಲೆಟ್ ಪ್ರಕಾಶ್, ಸಿತಾರ, ಶರತ್‌ಕುಮಾರ್, ಶರತ್ ಲೋಹಿತಾಶ್ವ, ಮುನಿ, ಕೋಟೆ ಪ್ರಭಾಕರ್ ಮುಂತಾದವರಿದ್ದಾರೆ. (ದಟ್ಸ್‌ಕನ್ನಡ ಸಿನಿವಾರ್ತೆ)


Click it and Unblock the Notifications











