ಬೆಂಗಳೂರಿನಲ್ಲಿ ಗೋಲ್ಡನ್ ಸ್ಟಾರ್, ಭಾವನಾ ಡಾನ್ಸ್
ಗೋಲ್ಡನ್ ಸ್ಟಾರ್ ಗಣೇಶ್ ಮತ್ತೊಮ್ಮೆ ಲವರ್ ಬಾಯ್ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿರುವ ಚಿತ್ರ ರೋಮಿಯೋ. ಇಬ್ಬರು ಪ್ರೇಮಿಗಳ ಮಧುರ ಕಾವ್ಯವೆ 'ರೋಮಿಯೋ. ಇತ್ತೀಚೆಗೆ ಈ ಚಿತ್ರದ ಹಾಡಿನ ಚಿತ್ರೀಕರಣ ಅಬ್ಬಾಯಿ ನಾಯ್ಡು ಸ್ಟುಡಿಯೋದಲ್ಲಿ ನಡೆಯಿತು.
ಕವಿರಾಜ್ ಬರೆದಿರುವ ಆಲೋಚನೆ ಆರಾಧನೆ ಎಲ್ಲಾ ನಿನ್ನಿಂದಲೇ ಎಂಬ ಹಾಡಿಗೆ ಗಣೇಶ್ ಹಾಗೂ ಭಾವನಾ ವಿದೇಶಿ ನೃತ್ಯಗಾರರೊಂದಿಗೆ ಹೆಜ್ಜೆ ಹಾಕಿದರು. ಈ ಹಾಡಿಗೆ ಶ್ರೀಲಕ್ಷ್ಮೀ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಖ್ಯಾತ ಗಾಯಕಿ ಶ್ರೇಯಾಘೋಶಾಲ್ ಈ ಹಾಡನ್ನು ಹಾಡಿದ್ದಾರೆ.
ಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ನಟರಾಜ್ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈದಿ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಗಣೇಶ್, ಭಾವನಾ(ಜಾಕಿ), ಅವಿನಾಶ್, ಸಾಧುಕೋಕಿಲಾ, ರಮೇಶ್‌ಭಟ್, ಮಿತ್ರ ರಂಗಾಯಣ ರಘು, ಸುಧಾಬೆಳವಾಡಿ ಮುಂತಾದವರಿದ್ದಾರೆ. ಕೆ.ಎಸ್.ಪಿಕ್ಚರ್ಸ್ ಲಾಂಛನದಲ್ಲಿ ನವೀನ್(ನಾಯಕ) ಹಾಗೂ ರಮೇಶ್‌ಕುಮಾರ್ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ. (ಒನ್‌ಇಂಡಿಯಾ ಕನ್ನಡ)


Click it and Unblock the Notifications











