ನ.24 ರಂದು ಬೆಂಗಳೂರಿನಲ್ಲಿ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ
ಬೆಂಗಳೂರು, ನವೆಂಬರ್ 22: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2017 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನವೆಂಬರ್ 24ರ ಸಂಜೆ 6-00 ಗಂಟೆಗೆ ನಗರದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರ ರಾಷ್ಟ್ರೀಯ ಸಮಾವೇಶ ಭವನ, ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿ ಏರ್ಪಡಿಸಲಾಗಿದೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶಸ್ತಿ ಪ್ರದಾನವನ್ನು ಮಾಡಲಿದ್ದಾರೆ. ಸಮಾರಂಭದ ಗೌರವ ಉಪಸ್ಥಿತಿಯನ್ನು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ, ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಅವರು ವಹಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು ಮುಖ್ಯ ಅತಿಥಿಗಳಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕೆ.ಜೆ. ಜಾರ್ಜ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಡಾ: ಜಯಮಾಲ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪೂಜ್ಯ ಮಹಾ ಪೌರರಾದ ಗಂಗಾಬಿಕೆ ಮಲ್ಲಿಕಾರ್ಜುನ್ ಅವರುಗಳು ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಅವರುಗಳು ವಿಶೇಷ ಆಹ್ವಾನಿತರಾಗಿರುವರು. ರಾಜ್ಯಸಭಾ ಸದಸ್ಯರುಗಳು, ವಿಧಾನ ಪರಿಷತ್ತಿನ ಸದಸ್ಯರುಗಳು, ವಿಧಾನ ಸಭೆಯ ಶಾಸಕರುಗಳು ಭಾಗವಹಿಸಲಿದ್ದಾರೆ.
ಆಹ್ವಾನಿತರಾಗಿ ನಾಗತಿಹಳ್ಳಿ ಚಂದ್ರಶೇಖರ್, ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಚಿನ್ನೇಗೌಡ ಅವರು ಉಪಸ್ಥಿತರಿರುವರು.


Click it and Unblock the Notifications











