»   »  ಸಿನಿಮಾ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನಟಿ ಶ್ರುತಿ?

ಸಿನಿಮಾ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನಟಿ ಶ್ರುತಿ?

Subscribe to Filmibeat Kannada
Actress Shruthi to head cinema academy?
ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿರುವ ಸಿನಿಮಾ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ತಾರೆ ಶ್ರುತಿ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ. ಮೂರನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರುಇನ್ನೆರಡು ವಾರಗಳಲ್ಲಿ ಸಿನಿಮಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿದ್ದರು. ಬೆಳಗಾವಿ ವಿಧಾನಮಂಡಲದ ಅಧಿವೇಶನದಲ್ಲೂ ಶೀಘ್ರದಲ್ಲೇ ಸಿನಿಮಾ ಅಕಾಡೆಮಿ ಸ್ಥಾಪಿಸುವುದಾಗಿ ಪುನರುಚ್ಚರಿಸಿದ್ದರು.

ಉಳಿದ ಅಕಾಡೆಮಿಗಳ ರೀತಿಯಲ್ಲೇ ರಾಜ್ಯದಲ್ಲಿ ಸಿನಿಮಾ ಅಕಾಡೆಮಿ ಸ್ಥಾಪಿಸಬೇಕು ಎಂಬುದು ಕನ್ನಡ ಚಿತ್ರರಂಗದ ಬಹುದಿನಗಳ ಬೇಡಿಕೆ. ಸನ್ಮಾನ್ಯ ಮುಖ್ಯಮಂತ್ರಿಗಳ ಭರವಸೆಯ ಮಾತುಗಳಿಂದ ಕನ್ನಡ ಚಿತ್ರರಂಗದ ಬೇಡಿಕೆಗೆ ರೆಕ್ಕೆಪುಕ್ಕ ಬಂದಿದೆ. ಕನ್ನಡದಲ್ಲಿ ನೂರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಶ್ರುತಿ ಅವರು ತಮ್ಮ ಸದಭಿರುಚಿಯ ಚಿತ್ರಗಳ ಮೂಲಕ ಕರ್ನಾಟಕ ಮನೆಮಾತಾಗಿದ್ದಾರೆ. ಈ ಹಿಂದೆ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯೂ ಹಬ್ಬಿತ್ತು. ಆದರೆ ಆ ಸುದ್ದಿ ಹುಸಿಯಾಯಿತು. ಶ್ರುತಿ ಮತ್ತು ಎಸ್.ಮಹೇಂದರ್ ದಂಪತಿಗಳು ಕಳೆದ ಉಪ ಚುನಾವಣೆ ಸಮಯದಲ್ಲಿ ಬಿಜೆಪಿ ಪರ ಪ್ರಚಾರ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.

ಶ್ರುತಿ ಅವರ ಪತಿ ಎಸ್.ಮಹೇಂದರ್ ಸಹ ಬಿಜೆಪಿ ಅಭ್ಯರ್ಥಿಯಾಗಿ ಕೊಳ್ಳೆಗಾಲ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಅವರು ಗೆಲ್ಲಲಿಲ್ಲ ಎಂಬುದು ಬೇರೆ ವಿಚಾರ. ಈ ಎಲ್ಲ ಕಾರಣಗಳಿಗಾಗಿ ಶ್ರುತಿ ಅವರನ್ನು ಸಿನಿಮಾ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಖಚಿತಪಡಿಸಿವೆ. ಅಕಾಡೆಮಿ ಸ್ಥಾಪನೆಗೂ ಮುನ್ನವೇ ಅಧ್ಯಕ್ಷ ಸ್ಥಾನಕ್ಕೆ ಶ್ರುತಿ ಹೆಸರು ಕೇಳಿಬರುತ್ತಿರುವುದು ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ.

(ದಟ್ಸ್ ಕನ್ನಡ ಚಿತ್ರವಾರ್ತೆ)


ಕರ್ನಾಟಕ ಫಿಲಂ ಅಕಾಡೆಮಿ ಲಿಂಗೈಕ್ಯ!
ವಿಧಾನ ಪರಿಷತ್ ಚುನಾವಣೆಗೆ ನಟಿ ಶ್ರುತಿ?
ನಗೆದೋಣಿಯೇರಿದ ಅಳುಮುಂಜಿ ಶ್ರುತಿ

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada