ಬೆಂಗಳೂರು, ಮೇ. 22: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮೇ 23 ರಂದು ಸಂಜೆ 4ಗಂಟೆಗೆ ನಗರದ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮಕ್ಕೆ ತಿಂಗಳ ಅತಿಥಿಯಾಗಿ ಆಗಮಿಸಿ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ಹಾಗೂ ಧಾರಾವಾಹಿ ನಿರ್ದೇಶಕ ಟಿ.ಎನ್. ಸೀತಾರಾಂ ಅವರು ಪಾಲ್ಗೊಳ್ಳಲಿದ್ದಾರೆಂದು ಇಲಾಖಾ ಪ್ರಕಟಣೆಯಲ್ಲಿ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
Story first published: Friday, May 22, 2009, 15:49 [IST]