»   » ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ ಹುಟ್ಟುಹಬ್ಬ

ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ ಹುಟ್ಟುಹಬ್ಬ

Posted By:
Subscribe to Filmibeat Kannada

ವರನಟ ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬನ್ನು ಏ.24ರಂದು ರಾಜ್ಯ ಸರಕಾರ ಇದೇ ಮೊದಲ ಬಾರಿಗೆ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದೆ. ರಾಜ್ ಹುಟ್ಟುಹಬ್ಬ ಶನಿವಾರ ಸಂಜೆ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.

ರಾಜ್ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರ ಅಮೋಘ ಅಭಿನಯದ 15 ನಿಮಿಷಗಳ ವಿಡಿಯೋ ಕ್ಲಿಪ್ಪಿಂಗ್ ಹಾಗೂ 60 ನಿಮಿಷಗಳ ಕಾಲ ಹಾಡುಗಳ ದೃಶ್ಯಾವಳಿಯನ್ನು ಪ್ರಸಾರ ಮಾಡಲಾಗುವುದು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ವಾರ್ತಾ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬೆಂಗಳೂರು ಉಸ್ತುವಾರಿ ಸಚಿವ ಆರ್ ಅಶೋಕ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಅವರ ಕುಟುಂಬದ ಸದಸ್ಯರು, ಚಲನಚಿತ್ರರಂಗದ ನಟ,ನಟಿಯರು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada