»   » ಸರ್ಕಾರದಿಂದ ಡಾ.ರಾಜ್‌ಕುಮಾರ್ ಜಯಂತಿ

ಸರ್ಕಾರದಿಂದ ಡಾ.ರಾಜ್‌ಕುಮಾರ್ ಜಯಂತಿ

Posted By:
Subscribe to Filmibeat Kannada

ಇನ್ನು ಮುಂದೆ ಪ್ರತಿವರ್ಷ ಏಪ್ರಿಲ್ 24 ರಂದು ದಿವಂಗತ ಡಾ. ರಾಜ್‌ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಕರ್ನಾಟಕ ಸರ್ಕಾರದ ಸಮಾರಂಭವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಿದೆ.

ಡಾ. ರಾಜ್‌ಕುಮಾರ್ ಪ್ರತಿಷ್ಠಾನದ ಉಪ ಸಮಿತಿ ಸಭೆಯಲ್ಲಿ ರಾಜ್ಯ ಸರ್ಕಾರವು ದಿ. ದೇವರಾಜ್ ಅರಸ್, ಜಗಜೀವನ್‌ರಾಮ್, ಕನಕ ಜಯಂತಿ ಮೊದಲಾದ ಜನ್ಮ ದಿನಾಚರಣೆಯನ್ನು ರಾಜ್ಯ ಸರ್ಕಾರದ ಸಮಾರಂಭವನ್ನಾಗಿ ಆಚರಿಸುವ ಮಾದರಿಯಲ್ಲಿ ದಿ. ಡಾ ರಾಜ್‌ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಸಹ ರಾಜ್ಯ ಸರ್ಕಾರದ ಸಮಾರಂಭವನ್ನಾಗಿ ಆಚರಿಸಲು ತೀರ್ಮಾನಿಸಿತ್ತು.

ಡಾ. ರಾಜ್‌ಕುಮಾರ್ ಪ್ರತಿಷ್ಠಾನದ ಈ ನಿರ್ಣಯದಂತೆ ಪ್ರತಿವರ್ಷ ಏಪ್ರಿಲ್ 24 ರಂದು ಡಾ. ರಾಜ್ ರವರ ಜನ್ಮ ದಿನಾಚರಣೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ಸಮಾರಂಭವನ್ನಾಗಿ ಆಚರಿಸಬೇಕೆಂದು ಕಂಠೀರವ ಸ್ಟುಡಿಯೋ ವ್ಯವಸ್ಥಾಪಕ ನಿರ್ದೇಶಕರು ಕೋರಿದ್ದರು. ಅದರಂತೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ರಾಜ್ ಕುಟುಂಬ ಮತ್ತು ಪ್ರತಿಷ್ಠಾನದ ಜೊತೆ ಚರ್ಚಿಸಿ ಡಾ.ರಾಜ್ ಕುಮಾರ್ ಜಯಂತಿ ಬಗ್ಗೆ ತೀರ್ಮಾನಿಸಲಾಗುತ್ತದೆ. ಪ್ರತಿಷ್ಠಾನದ ಮನವಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಒಪ್ಪಿದ್ದರಿಂದ ಆಡಳಿತಾತ್ಮಕ ಆದೇಶ ಹೊರಡಿಸಲಾಗಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜಯಚಾಮರಾಜೇ ಅರಸ್ ಹೇಳಿದ್ದಾರೆ.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada