ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ ಆರೋಗ್ಯ ತಪಾಸಣೆ
ಮೈಸೂರು : ನಟ ಡಾ.ವಿಷ್ಣುವರ್ಧನ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು. ಜೊತೆಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ನಗರದ ಯಾದವಗಿರಿಯಲ್ಲಿನ ವಿಕ್ರಮ್ ಆಸ್ಪತ್ರೆಯಲ್ಲಿ ಅವರು, ಹೃದಯ, ರಕ್ತದೊತ್ತಡ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಆರೋಗ್ಯ ತಪಾಸಣೆ ಪರೀಕ್ಷೆಗಳು ಮುಗಿದ ನಂತರ ಬೆಂಗಳೂರಿಗೆ ಮರಳಿದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕಳೆದ ಕೆಲವು ತಿಂಗಳ ಹಿಂದಷ್ಟೇ ಅನಾರೋಗ್ಯದಿಂದ ನಟ ವಿಷ್ಣುವರ್ಧನ್ ಬಳಲಿದ್ದರು. ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications