For Quick Alerts
  ALLOW NOTIFICATIONS  
  For Daily Alerts

  ಏ.24 ಡಾ.ರಾಜ್‌ ಹುಟ್ಟು ಹಬ್ಬ : ಕೆ.ಜಿ.ರಸ್ತೆಯಲ್ಲಿ ಪ್ರತಿಮೆ

  By Staff
  |

  ಬೆಂಗಳೂರು : ಕೆಂಪೇಗೌಡ ರಸ್ತೆಯಲ್ಲಿ ಡಾ.ರಾಜ್‌ಕುಮಾರ್‌ ಅವರ ಪ್ರತಿಮೆಯನ್ನು ಏ.24ರಂದು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅನಾವರಣ ಮಾಡಲಿದ್ದಾರೆ.

  ಈ ಸಮಾರಂಭದಲ್ಲಿ ರಾಜ್‌ ಕುಮಾರ್‌ ಪರಿವಾರ ಪಾಲ್ಗೊಳ್ಳಲಿದೆ ಎಂದು ಅಖಿಲ ಕರ್ನಾಟಕ ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್‌, ಸುದ್ದಿಗಾರರಿಗೆ ತಿಳಿಸಿದ್ದಾರೆ.

  ಬಸವ ಜಯಂತಿ, ಅಂಬೇಡ್ಕರ್‌ ಜಯಂತಿ ಮಾದರಿಯಲ್ಲಿ ಕರ್ನಾಟಕ ಸರ್ಕಾರ, ರಾಜ್‌ ಜಯಂತಿಯನ್ನು ಆಚರಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

  ಏ.24 ಡಾ.ರಾಜ್‌ಕುಮಾರ್‌ ಅವರ ಹುಟ್ಟಿದ ಹಬ್ಬ. ಈ ಹಿನ್ನೆಲೆಯಲ್ಲಿ ನಾಡಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

  (ದಟ್ಸ್‌ ಕನ್ನಡ ವಾರ್ತೆ)

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X