ನಟ ಶತ್ರುಘ್ನ ಸಿನ್ಹಾ ವಿರುದ್ಧ ಬಂಧನದ ವಾರಂಟ್
ಬಾಲಿವುಡ್ ನಟ, ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ವಿರುದ್ಧಸೋಮವಾರ (ಜ.24) ಬಂಧನದವಾರಂಟ್ ಜಾರಿ ಮಾಡಲಾಗಿದೆ. ಅಕ್ಟೋಬರ್ ನವೆಂಬರ್ 2010ರ ಬಿಹಾರ ವಿಧಾನಸಭೆ ಚುನಾವಣೆ ವೇಳೆ ಶತ್ರುಘ್ನ ಸಿನ್ಹಾ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂಬ ಕಾರಣಕ್ಕೆ ಬಂಧನದ ವಾರಂಟ್ ಜಾರಿ ಮಾಡಲಾಗಿದೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.
ಶತ್ರುಘ್ನ ಸಿನ್ಹಾ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಸಾಬೀತಾಗಿರುವ ಕಾರಣ, ಭಾನುವಾರ(ಜ.23) ರಾತ್ರಿಯೇ ಬಂಧನ ವಾರಂಟ್ ಜಾರಿ ಮಾಡಲಾಯಿತು ಎಂದು ಬಿಹಾರ ಪೊಲೀಸ್ ಸೂಪರಿಂಟೆಂಡೆಂಟ್ ನಿಶಾಂತ್ ಕುಮಾರ್ ತಿವಾರಿ ಹೇಳಿದ್ದಾರೆ.
ಚುನಾವಣಾ ಪ್ರಚಾರ ವೇಳೆ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಲ್ವಾ ಬಹುರಿ ಗ್ರಾಮದಲ್ಲಿ ಪರವಾನಗಿ ಇಲ್ಲದೆ ತಮ್ಮ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ ಕಾರಣ ಕಳೆದ ವರ್ಷ ಶತ್ರುಘ್ನ ಸಿನ್ಹಾ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಪಾಟ್ನಾ ಸಾಹಿಬ್ ಕ್ಷೇತ್ರದ ಬಿಜೆಪಿ ಸಂಸದರಾಗಿ ಸಿನ್ಹಾ ಕಾರ್ಯನಿರ್ವಹಿಸುತ್ತಿದ್ದಾರೆ. [ಅಪರಾಧ]
More from Filmibeat
English summary
An arrest order has been issued against the cinestar and BJP MP Shatrughan Sinha for allegedly violating the model code of conduct during Bihar assembly polls.


Click it and Unblock the Notifications











