ಕ್ರೆಜಿಸ್ಟಾರ್ 'ಹೂ'ವಿನ ಹಾಡಿಗೆ ಅದ್ದೂರಿ ಸೆಟ್
ದಿನೇಶ್ ಗಾಂಧಿ ನಿರ್ಮಿಸುತ್ತಿರುವ ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ 'ಹೂ' ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಹಾಡುಗಳ ಚಿತ್ರೀಕರಣ ಆರಂಭವಾಗಲಿದ್ದು, ಮುಂದಿನ ತಿಂಗಳ ಮಧ್ಯ ಭಾಗದಲ್ಲಿ ಚಿತ್ರದ ಚಿತ್ರೀಕರಣ ಸಂಪೂರ್ಣಗೊಳಲಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದ ಹಾಡುಗಳು ವಿ.ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಲ್ಲಿ ಉತ್ತಮವಾಗಿ ಮೂಡಿ ಬಂದಿದ್ದು, ಅದ್ದೂರಿ ಸೆಟ್‌ಗಳಲ್ಲಿ ಹಾಡುಗಳನ್ನು ಚಿತ್ರೀಕರಿಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.
ರವಿಚಂದ್ರನ್ ಅವರೇ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಹೊಣೆಯನ್ನು ಹೊತ್ತಿದ್ದಾರೆ. ಜಿ.ಎಸ್.ವಿ.ಸೀತಾರಾಂ ಅವರ ಛಾಯಾಗ್ರಹಣವಿರುವ 'ಹೂಚಿತ್ರದಲ್ಲಿ ಆರು ಹಾಡುಗಳು ಅಡಕವಾಗಿದೆ. ರವಿಚಂದ್ರನ್ ಅವರಿಗೆ ಜೋಡಿಯಾಗಿ ಮೀರಾಜಾಸ್ಮಿನ್ ಹಾಗೂ ನಮಿತಾ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲಾ, ಬುಲೆಟ್ ಪ್ರಕಾಶ್ ಹಾಗೂ ಶರಣ್ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)


Click it and Unblock the Notifications











