»   » ಭಾರಿ ಬ್ರೇಕ್ ನಿರೀಕ್ಷೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ಭಾರಿ ಬ್ರೇಕ್ ನಿರೀಕ್ಷೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

Posted By:
Subscribe to Filmibeat Kannada

ಗೋಲ್ಡನ್ ಸ್ಟಾರ್ ಗಣೇಶ್ ಭಾರಿ ಬ್ರೇಕ್ ನಿರೀಕ್ಷೆಯಲ್ಲಿದ್ದಾರೆ. ಅವರ ಅಭಿನಯದ ಮಳೆಯಲಿ ಜೊತೆಯಲ್ಲಿ ಹಾಗೂ ಕೂಲ್ ಚಿತ್ರಗಳು ನಿರೀಕ್ಷಿಸಿದ ಮಟ್ಟದಲ್ಲಿ ಯಶಸ್ವಿಯಾಗಿರಲಿಲ್ಲ. ಈಗ ಮತ್ತೊಮ್ಮೆ ಮನೆಮಂದಿಯನ್ನೆಲ್ಲಾ ಸೆಳೆಯಲು ಮದುವೆ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಈ ಚಿತ್ರ ದೀಪಾವಳಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಲು ಅಕ್ಟೋಬರ್ 28ರಂದು ತೆರೆಗೆ ಅಪ್ಪಳಿಸುತ್ತಿದೆ. ಕಿರುತೆರೆಯ ಧಾರಾವಾಹಿಗಳನ್ನು ನಿರ್ದೇಶಿಸಿ ಅನುಭವವಿರುವ ಸುನೀಲ್‌ಕುಮಾರ್‌ಸಿಂಗ್ ಈ ಚಿತ್ರದ ನಿರ್ದೇಶಕರು. ಮದುವೆಮನೆಗೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ನಿರ್ದೇಶಕರಿಗೆ ಇದು ಚೊಚ್ಚಲ ಚಿತ್ರ.

ಗಣೇಶ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಶ್ರದ್ಧಾಆರ್ಯ. ಅವಿನಾಶ್(ಜುಗಾರಿ), ತಬಲನಾಣಿ, ಶರಣ್, ಅರವಿಂದ್, ಹನುಮಂತೇಗೌಡ, ಕೆ.ವಿ.ನಾಗೇಶ್‌ಕುಮಾರ್, ಎಂ.ಎನ್.ಎಂ. ಚಿತ್ಕಲಾ, ಡಾ:ನಾಗೇಶ್, ಜಾದವ್ ಮೈಸೂರು, ಚಿನ್ನ ಮುಂತಾದವರು ಈ ಚಿತ್ರದಲ್ಲಿ ನಟಿಸಿರುವ ಕಲಾವಿದರು.

ಲವರ್ ಬಾಯ್ ಪಾತ್ರದಲ್ಲಿ ಗಣೇಶ್ ಅಭಿನಯಿಸಿದ್ದು ಚಿತ್ರದ ಸಂಭಾಷಣೆ ಪ್ರಮುಖ ಆಕರ್ಷಣೆಯಾಗಿ ನಿಲ್ಲಲಿದೆ. ಚಿತ್ರದ ಹಾಡುಗಳು ಉತ್ತಮವಾಗಿ ಮೂಡಿಬಂದಿವೆ. ತಮಾಷೆ, ಸೆಂಟಿಮೆಂಟ್‌ನಂತಹ ಎಲಿಮೆಂಟ್ಸ್ ಚಿತ್ರದಲ್ಲಿವೆ ಎಂದಿದ್ದಾರೆ ಗಣೇಶ್.

ಮಣಿಕಾಂತ್ ಕದ್ರಿ ಸಂಗೀತವಿರುವ ಈ ಚಿತ್ರಕ್ಕೆ ಶೇಖರ್‌ಚಂದ್ರು ರವರ ಛಾಯಾಗ್ರಹಣವಿದೆ. ಸೌಂದರ್‌ರಾಜ್ ಸಂಕಲನ, ರವಿವರ್ಮ ಸಾಹಸ ಹಾಗೂ ಮೋಹನ್ ಬಿ ಕೆರೆ ಕಲಾನಿರ್ದೇಶನ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತವಿರುವ ಈ ಚಿತ್ರಕ್ಕೆ ಶೇಖರ್‌ಚಂದ್ರು ರವರ ಛಾಯಾಗ್ರಹಣವಿದೆ. ಸೌಂದರ್‌ರಾಜ್ ಸಂಕಲನ, ರವಿವರ್ಮ ಸಾಹಸ ಹಾಗೂ ಮೋಹನ್ ಬಿ ಕೆರೆ ಕಲಾನಿರ್ದೇಶನ ಮದುವೆಮನೆ ಚಿತ್ರಕ್ಕಿದೆ. (ಒನ್‍ಇಂಡಿಯಾ ಕನ್ನಡ)

English summary
Golden Star Ganesh, Shraddha Arya lead Kannada movie is releasing on October 28th allover Karnataka. The film is made with regular commercial elements. Songs and dialogues are main attraction said the lead actor.
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada