ಮಾಗಿಯ ಚಳಿಗೆ ಗೋಲ್ಡನ್ ಸ್ಟಾರ್ ಗಣೇಶ್ ಶೈಲೂ
ಕಲಾ ಸಾಮ್ರಾಟ್ ಎಸ್ ನಾರಾಯಣ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ಶೈಲೂ' ಚಿತ್ರ ಮಾಗಿಯ ಚುಮುಚುಮು ಚಳಿಗೆ ತೆರೆಗೆ ಅಪ್ಪಳಿಸಲಿದೆ. ಡಿಸೆಂಬರ್ 2ನೇ ವಾರದಲ್ಲಿ ಚಿತ್ರ ತೆರೆಗೆ ಅಪ್ಪಳಿಸಲು ಸಿದ್ಧವಾಗುತ್ತಿದೆ. ಈ ಚಿತ್ರವನ್ನು ವೀಕ್ಷಿಸಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ 'ಯು' ಸರ್ಟಿಫಿಕೇಟ್ ನೀಡಿರುವುದು ಗೊತ್ತೇ ಇದೆ. ಚಿತ್ರದ ಬಗ್ಗೆ ಸೆನ್ಸಾರ್ ಮಂಡಳಿ ಒಂದೆರಡು ಮೆಚ್ಚುಗೆ ಮಾತುಗಳನ್ನೂ ಆಡಿದೆ.
ತಮಿಳಿನ ಹಿಟ್ ಚಿತ್ರ 'ಮೈನಾ' ರೀಮೇಕ್ ಇದಾಗಿದ್ದು ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಭಾಮಾ ಮುಖ್ಯ ಭೂಮಿಕೆಯಲ್ಲಿದ್ದಾರೆ. ಬೆಂಗಳೂರು, ಮುನ್ನಾರ್‌ನ ಚಹಾ ತೋಟಗಳಲ್ಲಿ ಚಿತ್ರೀಕರಿಸುವ ಈ ಚಿತ್ರಕ್ಕೆ ಜಗದೀಶ್ ವಾಲಿ ಛಾಯಾಗ್ರಹಣವಿದೆ.
ಜೆಸ್ಸಿ ಗಿಫ್ಟ್ ಸಂಗೀತವಿರುದ ಈ ಚಿತ್ರದ ಒಂದು ಹಾಡನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಡಿರುವುದು ವಿಶೇಷ. ರಂಗಾಯಣ ರಘು ಅವರು ಚಿತ್ರದಲ್ಲಿ ವಿಶೇಷ ಪಾತ್ರ ಪೋಷಿಸಿದ್ದಾರೆ. ಚಿತ್ರದ ನಿರ್ಮಾಪಕ ಕೆ ಮಂಜು, ಗಣೇಶ್ ಹಾಗೂ ಅವರ ಪತ್ನಿ ಶಿಲ್ಪಾ ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಿತ್ರದ ಯಶಸ್ವಿಗಾಗಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. (ಒನ್‌ಇಂಡಿಯಾ ಕನ್ನಡ)


Click it and Unblock the Notifications











