»   »  ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಮನಸಾರೆ

ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಮನಸಾರೆ

Subscribe to Filmibeat Kannada

ರಾಕ್‌ಲೈನ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸಿರುವ 'ಮನಸಾರೆ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ 'ಮುಂಗಾರು ಮಳೆ' ಸುರಿಸಿ ಯಶಸ್ಸಿನ 'ಗಾಳಿಪಟ' ಹಾರಿಸಿದ ಯೋಗರಾಜ್‌ಭಟ್ ಈ ಪ್ರೇಮ ಕಥಾನಕವನ್ನು ನಿರ್ದೇಶಿಸಿದ್ದಾರೆ.

ಕರ್ನಾಟಕದ ಐತಿಹಾಸಿಕ ಸ್ಥಳಗಳಲ್ಲಿ ಚಿತ್ರೀಕರಣಗೊಂಡಿರುವ 'ಮನಸಾರೆ' ಚಿತ್ರವನ್ನು ಛಾಯಾಗ್ರಾಹಕ ಸತ್ಯ ಹೆಗ್ಡೆ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಮಧುರ ಗೀತೆಗಳನ್ನೊಳಗೊಂಡಿರುವ ಈ ಚಿತ್ರಕ್ಕೆ ಮನೋಮೂರ್ತಿ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಧ್ವನಿಸುರುಳಿಗಳಿಗೆ ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರ ಕೂಡ ನೋಡುಗರನ್ನು ರಂಜಿಸಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

ನಿರ್ದೇಶಕರೇ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದರೆ, ಚಿತ್ರಕಥೆಯನ್ನೂ ಬಿ.ಪಿ.ಪವನಕುಮಾರ್ ರಚಿಸಿದ್ದಾರೆ. ಜೋನಿ ಹರ್ಷ ಸಂಕಲನ, ಶಶಿಧರ್ ಅಡಪ ಕಲೆ, ಕೌರವ ವೆಂಕಟೇಶ್ ಪಂಬಲ್ ರವಿ ಸಾಹಸ, ಹರ್ಷ ಮುರುಳಿ ನೃತ್ಯ ಹಾಗೂ ಸುರೇಶ್ ಅವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ದಿಗಂತ್, ಅಂದ್ರಿತಾ ರೇ, ರಾಜು ತಾಳಿಕೋಟೆ, ಅಚ್ಯುತ್ ಕುಮಾರ್, ಅಶೋಕ್‌ರಾವ್, ರಾಕ್‌ಲೈನ್ ಪುಷ್ಪಕ್, ಪವನ್‌ಕುಮಾರ್, ಧನಲಕ್ಷ್ಮೀ, ಸತೀಶ್ ಇದ್ದಾರೆ. ನಟಿ ನೀತು ಸ್ನೇಹಪೂರ್ವಕವಾಗಿ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada