»   » ನೆಚ್ಚಿನ ಚಿತ್ರಮಂದಿರಗಳಲ್ಲಿ 'ನಿರ್ದೋಷಿ'

ನೆಚ್ಚಿನ ಚಿತ್ರಮಂದಿರಗಳಲ್ಲಿ 'ನಿರ್ದೋಷಿ'

Posted By:
Subscribe to Filmibeat Kannada

ಗೋವರ್ಧನ್ ನಿರ್ದೇಶನದ 'ನಿರ್ದೋಷಿ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಿಂದೆ 'ರಸಗುಲ್ಲ' ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರಕ್ಕೆ ಕಾರಾಣಂತರಗಳಿಂದ 'ನಿರ್ದೋಷಿ' ಎಂದು ಮರು ನಾಮಕರಣ ಮಾಡಲಾಯಿತು.

ಕುಮಾರಿ ಸಂಜನಾ ಅವರು ನಿರ್ಮಿಸಿರುವ ಈ ಚಿತ್ರ ವಿಭಿನ್ನ ಪ್ರೇಮಕಥೆಯನ್ನು ಹೊಂದಿದೆ. ಯುವ ಪೀಳಿಗೆಗೆ ನಮ್ಮ ಚಿತ್ರ ಮೆಚ್ಚುಗೆಯಾಗುವುದು ಖಂಡಿತಾ ಎನ್ನುತ್ತಾರೆ ನಿರ್ದೇಶಕರು.ಈ ಚಿತ್ರದಲ್ಲಿ ಖ್ಯಾತನಟ ಕುಲಭೂಷಣ್ ಖರಬಂದಾ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದು, ಸಂಗೀತವನ್ನೂ ಸಂಯೋಜಿಸಿದ್ದಾರೆ. ರುದ್ರಮೂರ್ತಿ ಶಾಸ್ತ್ರಿ ಅವರ ಗೀತರಚನೆ ಹಾಗೂ ಸಂಭಾಷಣೆ, ದಿವಾಕರ್ ರಾವ್ ಛಾಯಾಗ್ರಹಣ, ಪಿ.ಆರ್.ಸೌಂದರರಾಜ್ ಸಂಕಲನ, ಲೀಲಾಮನೋಹರ್ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಪಿಯೂಷ್, ಆನಂದ್, ಕಶೀಷ್, ರೀಚಾ, ಆರ್ಯ, ಮನೋಜ್ ಮುಂತಾದವರಿದ್ದಾರೆ.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada