ಫೆಬ್ರವರಿಯಲ್ಲಿ ತೆರೆಗೆ ‘ಜಸ್ಟ್ ಮಾತ್ ಮಾತಲ್ಲಿ’
ಸುದೀಪ್ ನಾಯಕನಾಗಿ ಅಭಿನಯಿಸುವುದರೊಂದಿಗೆ ನಿರ್ದೇಶನವನ್ನೂ ಮಾಡಿರುವ 'ಜಸ್ಟ್ ಮಾತ್ ಮಾತಲ್ಲಿ" ಚಿತ್ರ ಫೆಬ್ರವರಿ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಆರ್.ಶಂಕರ್ ತಿಳಿಸಿದ್ದಾರೆ.ಉತ್ತರ ಹಾಗೂ ದಕ್ಷಿಣ ರಾಜ್ಯಗಳ ಖ್ಯಾತ ನಟರ ಸಮ್ಮುಖದಲ್ಲಿ ಬಿಡುಗಡೆಗೊಂಡಿರುವ ಚಿತ್ರದ ಧ್ವನಿಸುರುಳಿಗಳಿಗೆ ಉತ್ತಮ ಪ್ರತಿಕ್ರಿಯೆ ದೊರತಿದೆ. ರಘುದೀಕ್ಷಿತ್ ಅವರ ಸಂಗೀತ ಸಂಯೋಜನೆಯಲ್ಲಿ ಹೊರಬಂದಿರುವ ಚಿತ್ರದ ಹಾಡುಗಳು ಕೇಳುಗರ ಮನ ಗೆದ್ದಿದೆ.
ಸುದೀಪ್ ಅವರೊಂದಿಗೆ ರಮ್ಯ ನಾಯಕಿಯಾಗಿ ನಟಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನೋಡುಗರ ಮನಸೂರೆಗೊಳ್ಳುವುದು ಖಂಡಿತಾ ಎನ್ನುತ್ತಾರೆ ನಿರ್ಮಾಪಕರು.ಶಂಕರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಸುದೀಪ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ.
ಶ್ರೀವೆಂಕಟ್ ಛಾಯಾಗ್ರಹಣ, ಕೆಂಪರಾಜ್ ಸಂಕಲನ, ಕೆ.ನಂಜುಂಡ ಸಂಭಾಷಣೆ, ರವಿವರ್ಮ ಸಾಹಸ, ಮುರುಳಿ, ಅಂಜು ಮಹೇಂದ್ರ ನೃತ್ಯ, ನರಸಿಂಹ ನಿರ್ಮಾಣ ನಿರ್ವಹಣೆ ಹಾಗೂ ಅಚ್ಯುತರಾವ್ ನಿರ್ಮಾಣ ಮೇಲ್ವಿಚಾರಣೆಯಿರುವ ಚಿತ್ರದ ಉಳಿದ ತಾರಾಬಳಗದಲ್ಲಿ ಅವಿನಾಶ್, ರಾಜೇಶ್, ಸಂಗೀತಾ, ಕೀರ್ತೀಗೌಡ, ಯತಿರಾಜ್, ಅರುಣ್‌ಸಾಗರ್, ರಘು ಮುಂತಾದವರಿದ್ದಾರೆ.


Click it and Unblock the Notifications











