»   » ಹಿರಿಯ ಅಭಿನೇತ್ರಿ ಲೀಲಾವತಿಗೆ ಹೃದಯ ಶಸ್ತ್ರಚಿಕಿತ್ಸೆ

ಹಿರಿಯ ಅಭಿನೇತ್ರಿ ಲೀಲಾವತಿಗೆ ಹೃದಯ ಶಸ್ತ್ರಚಿಕಿತ್ಸೆ

Posted By:
Subscribe to Filmibeat Kannada
Actress Leelavathi admits hospital
ತಮ್ಮ ಅತ್ಯಂತ ಸಹಜ ಅಭಿನಯದಿಂದ ಕನ್ನಡಿಗರ ಮನಗೆದ್ದಿದ್ದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ಅನಾರೋಗ್ಯದ ನಿಮಿತ್ತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೃದಯ ತೊಂದರೆಯಿಂದ ಬಳಲುತ್ತಿರುವ ಅವರನ್ನು ನಗರದ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟಿ ಲೀಲಾವತಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಅವರನ್ನು ತುರ್ತು ನಿಗಾ ಘಟಕದಿಂದ ಜನರಲ್ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಲೀಲಾವತಿ ಅವರ ಮಗ ಹಾಗೂ ಕನ್ನಡ ಚಿತ್ರರಂಗದ 'ಕನ್ನಡದ ಕಂದ' ವಿನೋದ್ ರಾಜ್ ಅಮ್ಮನ ಆರೈಕೆಯಲ್ಲಿದ್ದಾರೆ.

ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ತೀರಾ ಇತ್ತೀಚೆಗೆ ಅವರು ಈ ಇಳಿ ವಯಸ್ಸಿನಲ್ಲೂ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಅವರ ಜನ ಲೋಕಪಾಲ ಮಸೂದೆಗೆ ಆಗ್ರಹಿಸಿ ಮಾಡಿದ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿದ್ದನ್ನು ಸ್ಮರಿಸಬಹುದು.

ವರನಟ ಡಾ.ರಾಜ್ ಕುಮಾರ್ ಹಾಗೂ ಲೀಲಾವತಿ ಅವರ ಜೋಡಿ ಜನಪ್ರಿಯ ಎನ್ನಿಸಿಕೊಂಡಿತ್ತು. ಎಪ್ಪತ್ತರ ದಶಕದ ನಂತರ ನಾಯಕಿ ಪಾತ್ರಗಳಿಂದ ಹಿಂದೆ ಸರಿದು ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಮಮತಾಮಯಿ ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪಾತ್ರಗಳಲ್ಲಿ ಅನೇಕ ಪಾತ್ರಗಳಿಗೆ ಜೀವ ತುಂಬಿದ್ದಾರೆ. (ಒನ್‌ಇಂಡಿಯಾ ಕನ್ನಡ)

English summary
Kannada films yesteryear popular actress Leelavathi admitted to the M S Ramaiah hospital, Bangalore following chest pain. She has undergone for heart surgery.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada