ಜುಲೈನಲ್ಲಿ ತೆರೆಗೆ ಯಶ್, ಭಾಮಾ ಮೊದಲಾ ಸಲ
ಕರ್ನಾಟಕ ಟಾಕೀಸ್ ರವರ ಚೊಚ್ಚಲ ಕಾಣಿಕೆಯಾದ 'ಮೊದಲಾ ಸಲ' ಚಿತ್ರಕ್ಕೆ ಮಂಜರಿ ಸ್ಟುಡಿಯೋದಲ್ಲಿ ಡಿ.ಟಿ.ಎಸ್ ಅಳವಡಿಸಲಾಗಿದೆ. ಕಾವೇರಿ ತವರಾದ ಕರ್ನಾಟಕದ ಪ್ರೇಕ್ಷಣೀಯ ಸ್ಥಳಗಳು ಹಾಗೂ ಕೇರಳದ ಪ್ರಸಿದ್ದ ಜಲಪಾತಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆಯಿದೆ.
'ನವಗ್ರಹ', 'ಜೊತೆಜೊತೆಯಲಿ' ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿದ್ದ ಮಲ್ಲಿಕಾರ್ಜುನ್ ಗದಗ ಪ್ರಥಮ ಬಾರಿಗೆ ಸಾಫ್ಟ್ ವೇರ್ ಮಿತ್ರ ಯೋಗೀಶ್‌ನಾರಾಯಣ್ ಜೊತೆ ಚಿತ್ರ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ವೆಂಕಟೇಶ್‌ನಾಯಕ್, ಜಗದೀಶ್ ಕಾಳಗಿ, ಮಯೂರ್ ಮತ್ತು ಮಹೇಶ್‌ಪಟೇಲ್ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.
ಪುರುಷೋತ್ತಮ್ ಕತೆ, ಚಿತ್ರಕತೆ ಹಾಗೂ ಸಂಭಾಷಣೆ ಬರೆದು ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಎಚ್.ಸಿ.ವೇಣು ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ರವಿವರ್ಮ ಸಾಹಸ, ವಿ.ನಾಗೇಂದ್ರ ಪ್ರಸಾದ್ ಗೀತರಚನೆ, ದಿನೇಶ್ ಮಂಗಳೂರು ಕಲೆ ಹಾಗೂ ಶಶಿಧರ್ ರವರ ನಿರ್ಮಾಣ ನಿರ್ವಹಣೆಯಿದೆ. ಚಿತ್ರದ ತಾರಾಬಳಗದಲ್ಲಿ ಯಶ್, ಭಾಮ, ರಂಗಾಯಣ ರಘು, ಅವಿನಾಶ್, ಶರಣ್, ತಾರಾ, ಯೋಗೀಶ್‌ನಾರಾಯಣ್, ರಾಕೇಶ್, ತಿಮ್ಮೇಗೌಡ ಮುಂತಾದವರಿದ್ದಾರೆ.


Click it and Unblock the Notifications











